ಮಂಗಳೂರು : ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿದ ಪೊಲೀಸರು ಗಿರಾಕಿಗಳಾಗಿ ಬಂದಿದ್ದ ಮೂವರ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲು ಚಿಂತನೆ ನಡೆಸಿದ್ದಾರೆ.
ಮಂಗಳೂರಿನ ನಂದಿಗುಡ್ಡೆಯ ಬಳಿಯ ಪ್ಲ್ಯಾಟ್ನಲ್ಲಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಪ್ರಕರಣದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನನ್ನು ಪೊಲೀಸರು ಬಂಧಿಸಿದ್ದರು.