ಕರ್ನಾಟಕ

karnataka

ETV Bharat / state

ವೇಶ್ಯಾವಾಟಿಕೆ ದಂಧೆ: ಇಬ್ಬರು ಆರೋಪಿಗಳ ಬಂಧನ, ಮೂವರು ಯುವತಿಯರ ರಕ್ಷಣೆ - ಮಂಗಳೂರು ವೇಶ್ಯಾವಾಟಿಕೆ ದಂಧೆ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಮೂಡುಬಿದಿರೆ ತಾಲೂಕಿನ ಹರೀಶ್(45), ಸಾಗರ್ (40)ನನ್ನು ಬಂಧಿಸಲಾಗಿದೆ. ಮೂವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

prostitution case of Mangalore
prostitution case of Mangalore

By

Published : Aug 21, 2020, 12:15 AM IST

ಮಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.

ಮೂಡುಬಿದಿರೆ ತಾಲೂಕಿನ ಕಡಂದಲೆ ನಿವಾಸಿ ಹರೀಶ್(45), ಬೊಳುವಾರು ನಿವಾಸಿ ಸಾಗರ್ (40) ಬಂಧಿತ ಆರೋಪಿಗಳು. ನಗರದ ಪಂಪ್​ವೆಲ್​ನಲ್ಲಿರುವ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿದ್ದಾರೆ‌.

ಈ ಸಂದರ್ಭ ಲಾಡ್ಜ್ ಸಿಬ್ಬಂದಿ ಹರೀಶ್ ಹಾಗೂ ದಲ್ಲಾಳಿ ಸಾಗರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಮೂವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ಕುರಿತು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details