ಮಂಗಳೂರು: ನಗರದ ವೆಲೆನ್ಸಿಯಾದ ಫ್ಲ್ಯಾಟ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪಾಂಡೇಶ್ವರ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಮಂಗಳೂರು; ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ.. ಯುವತಿಯರ ರಕ್ಷಣೆ - Prostitution in Flat manglore
ಮಂಗಳೂರು ವೆಲೆನ್ಸಿಯಾದ ಫ್ಲ್ಯಾಟ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪಾಂಡೇಶ್ವರ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಮಂಗಳೂರು
ವೆಲೆನ್ಸಿಯಾದ ಅಪಾರ್ಟ್ಮೆಂಟ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಅಫೀಜ್ ಎಂಬಾತನ ಫ್ಲ್ಯಾಟ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ದಾಳಿ ವೇಳೆ ಇಬ್ಬರು ಬೆಂಗಳೂರು ಮೂಲದ ಯುವತಿಯರನ್ನು ರಕ್ಷಿಸಲಾಗಿದೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಗಣೇಶ್ ಶೆಟ್ಟಿ, ಫ್ಲ್ಯಾಟ್ ಮಾಲೀಕ ಅಫೀಜ್ ಮತ್ತು ಇವರಿಗೆ ಸಹಕರಿಸುತ್ತಿದ್ದ ಹರಿಣಾಕ್ಷಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.