ಕರ್ನಾಟಕ

karnataka

ETV Bharat / state

ಡಿಕೆಶಿ ಬಂಧನ ವಿರುದ್ಧ ಪ್ರತಿಭಟನೆ: ರಮಾನಾಥ ರೈ ಸೇರಿದಂತೆ ಹಲವರು ವಶಕ್ಕೆ - ಚಿಕ್ಕಮಗಳೂರು, ಆಲ್ದೂರು, ಬಾಳೆಹೊನ್ನೂರು

ಡಿಕೆಶಿ ಬಂಧನ ವಿರೋಧಿಸಿ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಚಿಕ್ಕಮಗಳೂರು ಹಾಗೂ ದ.ಕನ್ನಡದಲ್ಲಿ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ವಶಕ್ಕೆ

By

Published : Sep 4, 2019, 2:31 PM IST

ಚಿಕ್ಕಮಗಳೂರು/ಮಂಗಳೂರು: ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಬಂಧನ ವಿರೋಧಿಸಿ ಕೈ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರು ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಡಿಕೆಶಿ ಬಂಧನ ವಿರೋಧಿಸಿ ಹಲವೆಡೆ ಪ್ರತಿಭಟನೆ, ಬಿಜೆಪಿ ವಿರುದ್ಧ ಘೋಷಣೆ

ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬಿಜೆಪಿ, ಕಾಂಗ್ರೆಸ್-ಜೆಡಿಎಸ್‌ನ 17 ಶಾಸಕರನ್ನು ಕೋಟಿ ಕೋಟಿ ಆಮಿಷ ನೀಡಿ ಮುಂಬೈಗೆ ಕಳುಹಿಸಿದಾಗ ಇಡಿ, ಐಟಿ ಎಲ್ಲಿ ಹೋಗಿತ್ತು? ಎಂದು ಪ್ರಶ್ನಿಸಿದರು.

ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ದ‌.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಜೆ ಆರ್ ಲೋಬೋ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಚಿಕ್ಕಮಗಳೂರು, ಆಲ್ದೂರು, ಬಾಳೆಹೊನ್ನೂರು ಶೃಂಗೇರಿಯಲ್ಲಿ ಪ್ರತಿಭಟನೆ ನಡೆಯುತಿದ್ದು, ಟೈರ್‌ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details