ಕರ್ನಾಟಕ

karnataka

ETV Bharat / state

ಉಳ್ಳಾಲ; ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ - ಉಳ್ಳಾಲ ಪ್ರತಿಭಟನೆ ಲೆಟೆಸ್ಟ್ ನ್ಯೂಸ್

ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಮತ್ತು ಕೊರೊನಾ ಹೆಸರಿನಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಇಂದು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ವತಿಯಿಂದ ಮುಡಿಪು ಜಂಕ್ಷನ್​ನಲ್ಲಿ ಪ್ರತಿಭಟನಾ ಸಭೆ ನಡೆಯಿತು.

Protest
Protest

By

Published : Aug 27, 2020, 9:06 PM IST

ಉಳ್ಳಾಲ: ಮುಡಿಪು ಸರ್ಕಾರಿ ಆಸ್ಪತ್ರೆ ಬಲಪಡಿಸಲು, ಖಾಸಗಿ ಆಸ್ಪತ್ರೆ ‌ನಿಯಂತ್ರಿಸುವ ಸಲುವಾಗಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಮತ್ತು ಕೊರೊನಾ ಹೆಸರಿನಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಇಂದು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ವತಿಯಿಂದ ಮುಡಿಪು ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ, ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್ ಹಾಗೂ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ ಮಾತನಾಡಿದರು. ಉತ್ತಮ ಸರ್ಕಾರಿ ಆಸ್ಪತ್ರೆ ಮತ್ತು ಚಿಕಿತ್ಸೆ ಒದಗಬೇಕೆಂದು ಒತ್ತಾಯಿಸಿದರು.

ಸಭೆಯಲ್ಲಿ ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ರಫೀಕ್ ಹರೇಕಳ, ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಉಪಾಧ್ಯಕ್ಷ ರಝಾಕ್ ಮುಡಿಪು, ಕೋಶಾಧಿಕಾರಿ ಅಶ್ರಫ್ ಹರೇಕಳ, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು, ಕಾರ್ಯದರ್ಶಿ ಜಗದೀಶ್ ದೇರಳಕಟ್ಟೆ, ಡಿವೈಎಫ್ಐ ಮುಡಿಪು ಘಟಕದ ಅಧ್ಯಕ್ಷ ರಝಾಕ್ ಮುಡಿಪು, ಕಾರ್ಯದರ್ಶಿ ರಿಯಾಜ್, ಬಾಳೆಪುಣಿ ಕೈರಂಗಳ ಘಟಕದ ಅಧ್ಯಕ್ಷ ಅಲಿ ಕಾಯಾರ್, ಕಾರ್ಯದರ್ಶಿ ಖಲಂದರ್, ದೇರಳಕಟ್ಟೆ ಘಟಕದ ಅಧ್ಯಕ್ಷ ನವಾಜ್ ಉರುಮಣೆ, ಕೊಲ್ಲರಕೋಡಿ ಘಟಕದ ಅಧ್ಯಕ್ಷ ಆಸಿಫ್ ಕೊಲ್ಲರಕೋಡಿ, ಮುಖಂಡರಾದ ಶರೀಫ್ ವಿದ್ಯಾನಗರ, ನಿಜಾರ್ ಮುಡಿಪು, ಶಾಫಿ ಮುಡಿಪು, ನಿಜಾರ್ ಬಿಕೆ ಕಾಯಾರ್ ಉಪಸ್ಥಿತರಿದ್ದರು.

ABOUT THE AUTHOR

...view details