ಮಂಗಳೂರು: ಪಠ್ಯಪುಸ್ತಕದಿಂದ ಟಿಪ್ಪುಸುಲ್ತಾನ್ ಅಧ್ಯಾಯವನ್ನು ಕೈಬಿಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್ಐ) ನಗರದ ಮಿನಿವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು.
ಟಿಪ್ಪುಸುಲ್ತಾನ್ ಅಧ್ಯಾಯ ಕೈಬಿಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ - ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರತಿಭಟನೆ
ಪಠ್ಯಪುಸ್ತಕದಿಂದ ಟಿಪ್ಪುಸುಲ್ತಾನ್ ಅಧ್ಯಾಯವನ್ನು ಕೈಬಿಡುವವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್ಐ) ಪ್ರತಿಭಟನೆ ನಡೆಸಿದೆ.
ಪ್ರತಿಭಟನೆ
ಈ ಸಂದರ್ಭ ಪ್ರತಿಭಟನಾಕಾರರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮೈಸೂರು ಹುಲಿ ಎಂದಿಗೂ ಹುಲಿಯೇ, ಇಲಿಗಳಿಗೆ ಯಾಕೆ ಹುಲಿಯ ತಂಟೆ ಎಂದು ಆಕ್ರೋಶ ಹೊರಹಾಕಿದರು.
ಈ ಸಂದರ್ಭ ಸಿಎಫ್ಐ ರಾಜ್ಯ ಸಮಿತಿಯ ಸದಸ್ಯ ಇಮ್ರಾನ್ ಪಿ.ಜೆ ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ ಸಂಕಷ್ಟ ತಲೆದೋರಿರುವಾಗ ರಾಜ್ಯ ಸರ್ಕಾರ ತನ್ನ ಸಂಕುಚಿತ ಮನೋಭಾವ ಹಾಗೂ ಹೇಡಿತನವನ್ನು ಪ್ರದರ್ಶಿಸಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದರು.