ಮಂಗಳೂರು :ಅಲ್ಪಸಂಖ್ಯಾತ ಇಲಾಖೆಯ ವಿದ್ಯಾರ್ಥಿ ವೇತನ ವಿಳಂಬ ಧೋರಣೆ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು 'ಮೈನಾರಿಟಿ ಭವನ ಚಲೋ' ನಡೆಸಿದ್ರು. ಈ ವೇಳೆ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಅವರು ಪಾಂಡೇಶ್ವರದಲ್ಲಿರುವ ಮೌಲಾನಾ ಆಜಾದ್ ಭವನಕ್ಕೆ ಮುತ್ತಿಗೆ ಹಾಕಿದ ಪ್ರಸಂಗವೂ ನಡೆಯಿತು.
ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ವಿಳಂಬ: ಸಿಎಫ್‌ಐ ಕಾರ್ಯಕರ್ತರಿಂದ 'ಮೈನಾರಿಟಿ ಭವನ ಚಲೋ' - student Scholarship
ವಿದ್ಯಾರ್ಥಿ ವೇತನ ವಿಳಂಬ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು 'ಮೈನಾರಿಟಿ ಭವನ ಚಲೋ' ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರ ಪ್ರತೀವರ್ಷವೂ ಎಸ್ಎಸ್ಎಲ್‌ಸಿ ಒಳಗಿನ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೀಡುವ 'ಅರಿವು', 'ವಿದ್ಯಾರ್ಥಿಸಿರಿ'ಯಂತಹ ವಿದ್ಯಾರ್ಥಿ ವೇತನಗಳನ್ನು ನೀಡಲು ವಿಳಂಬ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು. ಪ್ರತಿಭಟನೆ ವೇಳೆ ಮೌಲಾನ ಆಜಾದ್ ಭವನಕ್ಕೆ ಕಂಪೌಂಡ್ ಹಾರಿ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಇದರಿಂದ ಕೋಪಗೊಂಡ ಸಿಎಫ್‌ಐ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದ್ರು.
ಪ್ರತಿಭಟನೆಯಲ್ಲಿ ಸಿಎಫ್‌ಐ ರಾಜ್ಯಾಧ್ಯಕ್ಷ ಫಯಾಜ್ ದೊಡ್ಡಮನೆ, ಜಿಲ್ಲಾಧ್ಯಕ್ಷ ಮಹಮ್ಮದ್ ಸಾದಿಕ್, ಮಾಧ್ಯಮ ಸಂಯೋಜಕ ತಾಜುದ್ದೀನ್, ಹಸನ್ ಸಿರಾಜ್ ಮತ್ತಿತರರು ಪಾಲ್ಗೊಂಡಿದ್ದರು.