ಕರ್ನಾಟಕ

karnataka

ETV Bharat / state

ಸಂಸದ ಕಟೀಲ್​ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಎಫ್ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ - Protest in Mangalore

ಸಿಎಫ್ಐ ನಾಯಕ ರವೂಫ್ ಶರೀಫ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇದನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

Protest
ಪ್ರತಿಭಟನೆ

By

Published : Dec 26, 2020, 2:38 PM IST

Updated : Dec 26, 2020, 4:27 PM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಇರುವ ಸಂಸದರ ಕಚೇರಿಗೆ ಸಿಎಫ್ಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದರು. ಪೊಲೀಸರು ಅವರನ್ನು ತಡೆದು, ಮುಖಂಡರ ಜತೆ ಕೆಲವು ಕಾರ್ಯಕರ್ತರನ್ನು ವಶಪಡಿಸಿಕೊಂಡರು.

ಸಿಎಫ್ಐ ನಾಯಕ ರವೂಫ್ ಶರೀಫ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇದನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಸಂಸದರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಇದನ್ನೂ ಓದಿ: ಪುತ್ತೂರು ಗ್ರಾ.ಪಂ ಚುನಾವಣೆ: ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತದಾರರು

ಜಿಲ್ಲಾಧಿಕಾರಿ ಕಚೇರಿ ಗೇಟ್​​ನಲ್ಲಿಯೇ ಮುತ್ತಿಗೆ ಹಾಕಲು ಯತ್ನಿಸಿದ್ದ ಸಿಎಫ್ಐ ಕಾರ್ಯಕರ್ತರನ್ನು ತಡೆದ ಪೊಲೀಸರು, ಸಂಸದರ ಕಚೇರಿಗೆ ಮುತ್ತಿಗೆ ಹಾಕದಂತೆ ತಡೆದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಸಿಎಫ್ಐ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ನೂಕಾಟ ನಡೆಯಿತು.

ಆಕ್ರೋಶಿತರಾದ ಪಿಎಫ್ಐ ಕಾರ್ಯಕರ್ತರು ಕೇಂದ್ರ ಸರ್ಕಾರ, ಜಿಲ್ಲಾ ಸಂಸದ ನಳಿನ್ ಕುಮಾರ್, ಇಡಿ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪೊಲೀಸರು ಸಿಎಫ್ಐ ನಾಯಕರು ಹಾಗೂ ಕೆಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

Last Updated : Dec 26, 2020, 4:27 PM IST

ABOUT THE AUTHOR

...view details