ಮಂಗಳೂರು:ನಗರದಲ್ಲಿ ಬುಧವಾರ ಮಧ್ಯಾಹ್ನ 2.30 ರಿಂದ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಕಣ್ಣೂರಿನ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಅದಕ್ಕೆ ಪರವಾನಗಿಯನ್ನು ಪೊಲೀಸ್ ಇಲಾಖೆ ನೀಡಿದೆ ಎಂದು ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದರು. ಈ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಲಿದೆ ಎಂದಿದ್ದಾರೆ.
ಬುಧವಾರ ಕಣ್ಣೂರಿನಲ್ಲಿ ಪ್ರತಿಭಟನಾ ಸಮಾವೇಶ: ಬದಲಿ ರಸ್ತೆ ಸಂಚಾರಕ್ಕೆ ವ್ಯವಸ್ಥೆ - ಪ್ರತಿಭಟನಾ ಸಮಾವೇಶ ಮಂಗಳೂರು
ನಗರದಲ್ಲಿ ಬುಧವಾರ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಕಣ್ಣೂರಿನ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಅದಕ್ಕೆ ಪರವಾನಗಿಯನ್ನು ಪೊಲೀಸ್ ಇಲಾಖೆ ನೀಡಿದೆ ಎಂದು ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದರು.

ಈ ಬಗ್ಗೆ ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾತನಾಡಿ, ಬೆಳಗ್ಗೆ 8 ರಿಂದ ರಾತ್ರಿ 10 ರವರೆಗೆ ರಸ್ತೆ ಸಂಚಾರದಲ್ಲಿ ಬದಲಾವಣೆಯಾಗಲಿದೆ. ಬೆಳಗ್ಗೆ 8 ರಿಂದ ರಾತ್ರಿ 10 ರವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಎಂಆರ್ ಪಿಎಲ್ ಹಾಗೂ ಎನ್ಎಂಪಿಟಿ ಗಳಿಗೆ ಹೋಗುವ ಟ್ಯಾಂಕರ್ಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಂಗಳೂರಿನ ಪಂಪ್ವೆಲ್ ಬಳಿ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗುತ್ತದೆ.
ಇನ್ನು ಮುಸ್ಲಿಂ ಸೆಂಟ್ರಲ್ ಕಮಿಟಿಯವರು ಈ ಬಗ್ಗೆ ನಮಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಅವರ ಕಡೆಯಿಂದಲೂ ಸಾಕಷ್ಟು ಸ್ವಯಂ ಸೇವಕರನ್ನು ನೇಮಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ವ್ಯವಸ್ಥಿತವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಆಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಹೇಳಿದರು.