ಪುತ್ತೂರು: ಹಥ್ರಾಸ್‌ನಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣವು ದೇಶವೇ ತಲೆ ತಗ್ಗಿಸುವ ಪ್ರಕರಣವಾಗಿದ್ದು, ಈ ನರಹಂತಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಗಲ್ಲಿಗೇರಿಸಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು.
ಹಥ್ರಾಸ್ ನರಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಪುತ್ತೂರಿನಲ್ಲಿ ಮಿಥುನ್ ರೈ ಆಗ್ರಹ - Puttur and Vitla-Uppinangadi Block Congress SC Unit
ಉತ್ತರ ಪ್ರದೇಶದ ಹಥ್ರಾಸ್ ಎಂಬಲ್ಲಿ ನಡೆದ ಯುವತಿಯ ಅತ್ಯಾಚಾರ, ದೌರ್ಜನ್ಯ ಖಂಡಿಸಿ ಪುತ್ತೂರು ಮತ್ತು ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದಿಂದ ಸೋಮವಾರ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.
ಅವರು ಉತ್ತರ ಪ್ರದೇಶದ ಹಥ್ರಾಸ್ ಎಂಬಲ್ಲಿ ನಡೆದ ಯುವತಿಯ ಅತ್ಯಾಚಾರ, ದೌರ್ಜನ್ಯ ಖಂಡಿಸಿ ಪುತ್ತೂರು ಮತ್ತು ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ವತಿಯಿಂದ ಸೋಮವಾರ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಚುನಾವಣೆಯ ಕಾರಣಕ್ಕಾಗಿ ಬಿಜೆಪಿಯು ಜನರಲ್ಲಿ ಜಾತಿ ವಿಷಬೀಜ ಬಿತ್ತುವ ಕೆಲಸವನ್ನು ನಿರಂತರವಾಗಿ ನಡೆಸುತ್ತಿದೆ. ಅವರ ವಿರುದ್ಧ ಜನತೆ ಎಚ್ಚರದಿಂದ ಇರಬೇಕು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡುವ ತನಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಯುವತಿಗೆ ನ್ಯಾಯ ಸಿಗುವ ತನಕ ಹೋರಾಟ ನಡೆಸಲಿದ್ದೇವೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಉಪ್ಪಿನಂಗಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್, ಮಾಜಿ ಅಧ್ಯಕ್ಷ ಮೊಯ್ದೀನ್ ಅರ್ಶದ್ ದರ್ಬೆ ಮತ್ತಿತರರು ಉಪಸ್ಥಿತರಿದ್ದರು.