ಮಂಗಳೂರು: ಕೇಂದ್ರ ಸರ್ಕಾರದದ ಕಾರ್ಮಿಕ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳಿಂದ ನಗರದ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ - Protest by labor organizations
ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮಂಗಳೂರು ನಗರದಲ್ಲಿ ಹಲವು ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ...!
ಲಾಕ್ಡೌನ್ ಸಂದರ್ಭದ ವೇತನ, ಕಾರ್ಮಿಕ ಕಾನೂನು ತಿದ್ದುಪಡಿ ನಿಲ್ಲಿಸಬೇಕು, ಕೊರೊನಾ ವಾರಿಯರ್ಗಳನ್ನು ಖಾಯಂಗೊಳಿಸಿ, ಖಾಸಗೀಕರಣ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಈ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ದೇಶವ್ಯಾಪಿ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಎಐಟಿಯುಸಿ, ಸಿಐಟಿಯು, ಇಂಟಕ್, ಹೆಚ್ಎಂಎಸ್, ಎಐಸಿಸಿಟಿಯು ಸಂಘಟನೆಗಳು ಈ ವೇಳೆ ಭಾಗಿಯಾಗಿದ್ದವು.