ಕರ್ನಾಟಕ

karnataka

ETV Bharat / state

ಗಾಂಜಾ ಸಾಗಾಟ ಪ್ರಕರಣ: ಇಬ್ಬರಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ -

ಮಂಗಳೂರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಪ್ರಕರಣದ ಇಬ್ಬರ ಮೇಲಿನ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗಳಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂ. ದಂಡ ವಿಧಿಸಿ ಪ್ರಧಾನ ದ.ಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ದ.ಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

By

Published : Jul 25, 2019, 5:12 AM IST

ಮಂಗಳೂರು: ಅಕ್ರಮವಾಗಿ ಗಾಂಜಾ ಸಾಗಾಟ ಪ್ರಕರಣದ ಇಬ್ಬರ ಮೇಲಿನ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗಳಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂ. ದಂಡ ವಿಧಿಸಿ ಪ್ರಧಾನ ದ.ಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ದ.ಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಾಜೂರು ದರ್ಗಾ ಬಳಿಯ ನಿವಾಸಿ ಮುಹಮ್ಮದ್ ತೌಸಿಫ್(22) ಹಾಗೂ ಮಲವಂತಿಗೆ ಗ್ರಾಮದ ಕಾಜೂರು ನಿವಾಸಿ ಅಬ್ದುಲ್ ಸಿನಾನ್ (24) ಶಿಕ್ಷೆಗೊಳಗಾದವರು. ದಂಡ ಪಾವತಿಸಲು ವಿಫಲರಾದರೆ ಮತ್ತೆ ಆರು ತಿಂಗಳು ಸಾದಾ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

2018ರ ಮಾರ್ಚ್ 13ರಂದು ಕಡೂರು-ಬಂಟ್ವಾಳ ರಸ್ತೆಯಲ್ಲಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜು ಎದುರು ಬೆಳ್ತಂಗಡಿ ಠಾಣಾ ಪಿಎಸ್​​ಐ ಗಿರೀಶ್ ವಾಹನ ತಪಾಸಣೆ ಮಾಡುತ್ತಿದ್ದಾಗ ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಮಾರುತಿ ಕಾರು ಪೊಲೀಸರನ್ನು ಗಮನಿಸಿ ಅಲ್ಲಿಂದಲೇ ಹಿಂದಿರುಗಿ ಪರಾರಿಯಾಗಲು ಯತ್ನಿಸಿತ್ತು. ಆಗ ಪೊಲೀಸರು ಸುತ್ತುವರೆದು ತಪಾಸಣೆ ಮಾಡಿದ್ದರು. ಈ ವೇಳೆ ಕಾರಿನಲ್ಲಿ ಗಾಂಜಾ ಪತ್ತೆಯಾಗಿತ್ತು. ಗಾಂಜಾ, ಕಾರು, ಮೊಬೈಲ್ ಹಾಗೂ ನಗದನ್ನು ವಶಪಡಿಸಿಕೊಂಡು ಎನ್‌ಡಿಪಿಎಸ್ ಕಾಯ್ದೆಯಡಿ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯ ಪ್ರಕರಣದ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪುಷ್ಪರಾಜ ಕೆ. ಹಾಗೂ ರಾಜು ಪೂಜಾರಿ ಬನ್ನಾಡಿ ವಾದಿಸಿದ್ದರು.

For All Latest Updates

TAGGED:

ABOUT THE AUTHOR

...view details