ಮಂಗಳೂರು : ನಗರದಲ್ಲಿ ಕರ್ತವ್ಯದಲ್ಲಿದ್ದ ಸಿಐಎಸ್ಎಫ್ ನ ಪಿಎಸ್ಐವೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ನಿವಾಸಿಯಾಗಿರುವ ಪಿಎಸ್ಐ ಜಾಕೀರ್ ಹುಸೇನ್ (58) ಆತ್ಮಹತ್ಯೆ ಮಾಡಿಕೊಂಡವರು.
ಜಾಕೀರ್ ಹುಸೇನ್ ಅವರನ್ನು NMPT ಮುಖ್ಯ ಗೇಟ್‌ನಲ್ಲಿ ನೈಟ್ ಶಿಫ್ಟ್‌ಗೆ ನಿಯೋಜಿಸಲಾಗಿತ್ತು. ಇಂದು ಮುಂಜಾನೆ 6.30ರ ಸುಮಾರಿಗೆ ಪಾಳಿ ಮುಗಿಸಿ ಮುಖ್ಯ ಗೇಟ್‌ನ ಪಕ್ಕದಲ್ಲಿರುವ ವಾಶ್‌ರೂಮ್‌ಗೆ ತೆರಳಿದ್ದಾರೆ. ಈ ವೇಳೆ ವಾಶ್ ರೂಮ್ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ :ಇವಿಎಂ ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ