ಕರ್ನಾಟಕ

karnataka

ETV Bharat / state

ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಪುದುಚೇರಿ ಮಾಜಿ ಸಿಎಂ ನಾರಾಯಣ ಸ್ವಾಮಿ‌ - ಪುದುಚೇರಿಯ ಮಾಜಿ ಸಿಎಂ ನಾರಾಯಣ ಸ್ವಾಮಿ‌

ಇಂದು ಬೆಳಗ್ಗೆ ಪುದುಚೇರಿಯ ಮಾಜಿ ಸಿಎಂ ನಾರಾಯಣ ಸ್ವಾಮಿ‌ ಯೆನೆಪೊಯ ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಿದರು.

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಪುದುಚೇರಿಯ ಮಾಜಿ ಸಿಎಂ ನಾರಾಯಣ ಸ್ವಾಮಿ‌
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಪುದುಚೇರಿಯ ಮಾಜಿ ಸಿಎಂ ನಾರಾಯಣ ಸ್ವಾಮಿ‌

By

Published : Aug 6, 2021, 2:22 PM IST

ಮಂಗಳೂರು :ಇಂದು ಬೆಳಗ್ಗೆ ಪುದುಚೇರಿಯ ಮಾಜಿ ಸಿಎಂ ನಾರಾಯಣ ಸ್ವಾಮಿ‌ ನಗರದ ಯೆನೆಪೊಯ ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಿದರು.

ನಿನ್ನೆ ಏಕಾಏಕಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಚಳಿ ಹಾಗೂ ಜ್ವರ ಕಂಡು ಬಂದಿತ್ತು. ಇಂದು ಬೆಳಗ್ಗೆ ರಕ್ತದೊತ್ತಡವೂ ಸ್ವಲ್ಪ ಇಳಿಕೆಯಾಗಿತ್ತು. ತಕ್ಷಣ ವೈದ್ಯರು ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದು, ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದೆ. ಈಗ ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ : ಆಸ್ಕರ್ ಫರ್ನಾಂಡಿಸ್ ಆರೋಗ್ಯದಲ್ಲಿ ಕೊಂಚ ಚೇತರಿಕೆ.. ಬಾರದ ಪ್ರಜ್ಞೆ

ABOUT THE AUTHOR

...view details