ಪುತ್ತೂರು:16 ವರ್ಷಗಳ ಹಿಂದೆ ಪುತ್ತೂರಿನ ಹೊರವಲಯ ಮೊಟ್ಟೆತಡ್ಕ ನಿವಾಸಿಯೊಬ್ಬರ ಮನೆಯಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣದ ಆರೋಪಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಮಂಗಳೂರು ತಾಲೂಕಿನ ಸುರತ್ಕಲ್ ಬಳಿಯ ವಿದ್ಯಾನಗರ ಹೊನ್ನಕಟ್ಟೆಯ ನಾಗರಾಜ್ ಬಳೆಗಾರ ಶಿಕ್ಷೆಗೊಳಗಾದ ಅಪರಾಧಿ. ಪ್ರಸ್ತುತ ಈತ ಬೇರೊಂದು ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
2006ರ ಮಾ.14 ರಿಂದ ಮಾ.16ರ ಮಧ್ಯೆ ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದ ಮಹೇಂದ್ರ ಕುಮಾರ್ ಎಂಬುವರ ಮನೆಯ ಬಾಗಿಲಿನ ಬೀಗ ಮುರಿದು 43,000 ರೂ. ಮೌಲ್ಯದ 50.930 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು.
ಈ ಪ್ರಕರಣದ ತನಿಖೆಯನ್ನು ಅಂದಿನ ಜಿಲ್ಲಾ ಅಪರಾಧ ಪತ್ತೆ ದಳದ ನಿರೀಕ್ಷಕರಾದ ತಿಲಕ್ ಚಂದ್ರ ನೇತೃತ್ವದ ತಂಡ ಮಾಡಿದ್ದು, ಸಂತೋಷ ಮತ್ತು ನಾಗರಾಜ್ ಬಳೆಗಾರ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣದ ಬಗ್ಗೆ ಪುತ್ತೂರು ನಗರ ಠಾಣೆ ಎಸ್ಐ ಕೃಷ್ಣ ನಾಯ್ಕ್ ಅವರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.