ಪುತ್ತೂರು(ದಕ್ಷಿಣಕನ್ನಡ): ನಾಡಪ್ರಭು ಕೆಂಪೇಗೌಡ ಬೆಂಗಳೂರನ್ನು ಕಟ್ಟಿದ ಐತಿಹಾಸಿಕ ಪುರುಷ. ಇವರ ಗೌರವಾರ್ಥ ಇಂದು ಕರ್ನಾಟಕ ರಾಜ್ಯ ಸರ್ಕಾರವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬ್ರಹತ್ ಪ್ರತಿಮೆಯನ್ನು ನಿರ್ಮಾಣಗೊಳಿಸುವ ಯೋಜನೆ ಅನುಷ್ಠಾನಗೊಳಿಸುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಪುತ್ತೂರು: ನಾಡಪ್ರಭು ಕೆಂಪೇಗೌಡ ಜಯಂತಿ ಸರಳ ಆಚರಣೆ - Nadaprabhu Kempegowda Jayanti
ಪುತ್ತೂರು ನಗರದ ಮಿನಿವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ಸರಳವಾಗಿ ಆಚರಿಸಲಾಯಿತು.
ಪುತ್ತೂರು: ನಾಡಪ್ರಭು ಕೆಂಪೇಗೌಡ ಜಯಂತಿ ಸರಳ ಆಚರಣೆ
ಶನಿವಾರ ನಗರದ ಮಿನಿವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ದಿನಾಚಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಂಪೇಗೌಡ ದೂರದೃಷ್ಠಿ ಉಳ್ಳ ಅರಸರಾಗಿದ್ದರು. ಕೃಷಿ, ನೀರಾವರಿ ಯೋಜನೆಗಳು ದೇವಾಲಯಗಳ ಅಭಿವೃದ್ಧಿ, ಪೇಟೆ ಪಟ್ಟಣಗಳ ಅಭಿವೃದ್ಧಿ ಕಾರ್ಯಗಳನ್ನು ತಮ್ಮ ಆಡಳಿತಾವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಮಾಡಿದಂತವರು ಎಂದರು.