ಪುತ್ತೂರು:ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದ ಮಹಿಳೆಯೋರ್ವರು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.
ಪುತ್ತೂರು: ಸಾಂಬಾರು ಪಾತ್ರೆಗೆ ಬಿದ್ದು ಮಹಿಳೆ ಸಾವು - Woman dies after falling into a sambar vessel at puttur
ಪುತ್ತೂರಿನ ಸೈಂಟ್ ವಿಕ್ಟರ್ ಶಾಲೆಯಲ್ಲಿ ಬಿಸಿಯೂಟ ಮಾಡುತ್ತಿದ್ದ ಸಂದರ್ಭದಲ್ಲಿ ಸಾಂಬಾರು ಪಾತ್ರೆಗೆ ಕಾಲುಜಾರಿ ಬಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಪುತ್ತೂರಿನಲ್ಲಿ ಸಾಂಬಾರು ಪಾತ್ರೆಗೆ ಬಿದ್ದು ಮಹಿಳೆ ಸಾವು
ವಿವರ: ಪ್ರಮೀಳಾ ಡಿಸೋಜಾ ಅವರು ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಶಾಲೆಯ ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿಟ್ಟಿದ್ದ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.