ಕರ್ನಾಟಕ

karnataka

By

Published : Mar 12, 2021, 4:35 PM IST

ETV Bharat / state

28ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ದೇವರ ಮಾರುಗದ್ದೆಯಲ್ಲಿ ನಡೆಯುವ ಐತಿಹಾಸಿಕ ಕೋಟಿ-ಚೆನ್ನಯ ಕಂಬಳ ಕ್ರೀಡೆಗೆ ಅದ್ದೂರಿ ಚಾಲನೆ ದೊರೆಯಿತು.

Putturu Koti-Chennaya Jodukare Kambala
ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಪುತ್ತೂರು: ತುಳುನಾಡಿನ ಜಾನಪದ ವೀರ ಕ್ರೀಡೆ ಕಂಬಳವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಕಂಬಳ ಕ್ರೀಡೆಯು ಕಾನೂನಿನ ತೊಡಕುಗಳನ್ನು ನಿವಾರಿಸಿಕೊಂಡಿದೆ. ಕೃಷಿ ಸಂಸ್ಕೃತಿಯ ಪ್ರತೀಕವಾದ ಈ ಕ್ರೀಡೆ ಮನೋರಂಜನೆಯೂ ಆಗಿದೆ ಎಂದು ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು.

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಮಾರುಗದ್ದೆಯಲ್ಲಿ ನಡೆಯುವ 28ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಿವಂಗತ ಜಯಂತ್ ರೈ ಮತ್ತು ದಿವಂಗತ ಮುತ್ತಪ್ಪ ರೈ ಅವರು ಆರಂಭಿಸಿದ ಈ ಕಂಬಳ ಕೂಟವು ಪ್ರಸ್ತುತ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿಯವರ ನೇತೃತ್ವದಲ್ಲಿ ಮುಂದುವರಿಯುತ್ತಿದ್ದು, ಕಂಬಳ ಕ್ರೀಡೆಯು ನೂರಾರು ವರ್ಷಗಳ ಕಾಲ ನಿರಂತರವಾಗಿ ನಡೆಯುತ್ತಿರಲಿ ಎಂದು ಆಶಿಸಿದರು.

ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಇದನ್ನೂ ಓದಿ: ಸಿದ್ದಗಂಗಾ ಮಠದಲ್ಲಿ ಅದ್ಧೂರಿಯಾಗಿ ನಡೆದ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ

ಪುತ್ತೂರು ನಗರಸಭಾಧ್ಯಕ್ಷ ಕೆ. ಜೀವಂಧರ ಜೈನ್ ಮಾತನಾಡಿ, ಕಂಬಳ ಕೂಟವೆಂದರೆ ಅದು ಜಾತ್ರೆಯ ವಾತಾವರಣವನ್ನು ಸೃಷ್ಟಿಸುತ್ತದೆ. ಜಾತಿ- ಮತ ಬೇಧವಿಲ್ಲದೆ ಈ ಜಾನಪದ ಕ್ರೀಡೆಯಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ABOUT THE AUTHOR

...view details