ಮಂಗಳೂರು: ಸೋನಿಯಾ ಗಾಂಧಿ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆಯಾಗಿದ್ದು, ಇಂದು ಕಾಂಗ್ರೆಸ್ಗೆ ರಾಷ್ಟ್ರ ನಾಯಕರಿಲ್ಲ. ಪಕ್ಷವನ್ನು ನಡೆಸಲು ಸಾಧ್ಯವಿಲ್ಲದ ಸೋನಿಯಾ ಗಾಂಧಿ, ರಾಜ್ಯಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗದ ರಾಹುಲ್ ಗಾಂಧಿಗೆ ಈ ರಾಷ್ಟ್ರವನ್ನು ನಡೆಸಲು ಸಾಧ್ಯವಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದ್ದಾರೆ.
ನಗರದ ಪುರಭವನದಲ್ಲಿ ನಡೆದ ಬಿಜೆಪಿಯ ದ.ಕ ಜಿಲ್ಲಾ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರಿಗೆ ಮಾತ್ರ ಈ ರಾಜ್ಯ ಮತ್ತು ರಾಷ್ಟ್ರವನ್ನು ನಡೆಸಲು ಸಾಧ್ಯ. ರಾಜ್ಯದ ಉಪ ಚುನಾವಣೆಯಲ್ಲಿ ಬಿಜೆಪಿ ಹದಿಮೂರು ಸ್ಥಾನ ಗಳಿಸಿ ಕಾಂಗ್ರೆಸ್ ನೆಲಕಚ್ಚಿತ್ತು. ಆ ಕಾರಣಕ್ಕಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ರಾಜೀನಾಮೆ ನೀಡಿದರು. ಆರು ತಿಂಗಳಾದರೂ ಕಾಂಗ್ರೆಸ್ಗೆ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ. ಬಿಜೆಪಿಯಲ್ಲಿ ಜಿಲ್ಲೆಯ 35 ಕಡೆಗಳಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದೇವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ರು.