ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಮುಂಗಾರು ಮಳೆ ಹನಿಗಳ ಲೀಲೆ: ಆರೆಂಜ್ ಅಲರ್ಟ್ ಘೋಷಣೆ - ಮಂಗಳೂರಿನಲ್ಲಿ ಭಾರೀ ಮಳೆ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರಿನ ಅಬ್ಬರ ಜೋರಾಗಿದೆ. ನಿನ್ನೆ ರಾತ್ರಿಯಿಂದ ಕರಾವಳಿ ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಂದೂ ಮುಂದುವರಿದಿದೆ.

continues raining in  manglore
ಮಂಗಳೂರಿನಲ್ಲಿ ಧಾರಾಕಾರ ಮಳೆ

By

Published : Jun 14, 2020, 9:54 AM IST

ಮಂಗಳೂರು:ನಗರದಲ್ಲಿ ಕಳೆದ ರಾತ್ರಿಯಿಂದಲೇ ಆರಂಭವಾಗಿರುವ ಮಳೆ ಒಂದು ಕ್ಷಣವೂ ಬಿಡುವು ಕೊಡದಂತೆ ನಿರಂತರವಾಗಿ ಸುರಿಯುತ್ತಿದೆ.

ಮಂಗಳೂರಿನಲ್ಲಿ ಮುಂದುವರಿದ ಮಳೆ

ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿನ್ನೆಯಿಂದ ಇಂದಿನವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಎಲ್ಲರೂ ಎಚ್ಚರಿಕೆಯಿಂದಿದ್ದು, ಯಾರೂ ಸಮುದ್ರ ತೀರಕ್ಕೆ ತೆರಳಬಾರದೆಂದು ಸೂಚನೆ ನೀಡಲಾಗಿದೆ.

ABOUT THE AUTHOR

...view details