ಕರ್ನಾಟಕ

karnataka

ETV Bharat / state

ದ.ಕ.ಜಿಲ್ಲೆಯಲ್ಲಿ ಕೊಂಚವೂ ಬಿಡುವು ನೀಡದ ವರುಣ ; ಜನಜೀವನ ಅಸ್ತವ್ಯಸ್ತ

ಚಾರ್ಮಾಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಸಂಪೂರ್ಣ ನಾಶವಾಗಿದ್ದು, ಇದನ್ನು ದುರಸ್ತಿ ಗೊಳಿಸಲು ತಿಂಗಳುಗಳ ಕಾಲ ಕಾಮಗಾರಿ ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್‌ 15ರಿಂದ ಸೆಪ್ಟೆಂಬರ್ 14ರವರೆಗೆ ವಾಹನ ಸಂಚಾರ ನಿಷೇಧಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಮಳೆ

By

Published : Aug 15, 2019, 10:03 AM IST

ಮಂಗಳೂರು:ದ.ಕ ಜಿಲ್ಲೆಯಲ್ಲಿ ಮೊನ್ನೆ ಸಂಜೆಯಿಂದಲೇ ಮಳೆಯು ಬಿರುಸು ಪಡೆದಿದ್ದು, ಇಂದು ಬೆಳಗ್ಗೆಯೂ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಡದೇ ಸುರಿಯುತ್ತಿರುವ ಮಳೆ

ಮತ್ತೆ ಮಳೆಯು ನಿರಂತರವಾಗಿ ಸುರಿಯಲಿದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದ‌.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಟ್ವೀಟ್ ಮೂಲಕ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಇಂದು ಬೆಳಗ್ಗೆ 8. 30 ವರೆಗೆ ರೆಡ್ ಅಲರ್ಟ್ ಇರಲಿದೆ ಎಂದು ಡಿಸಿ ಟ್ವೀಟ್​​​ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಚಾರ್ಮಾಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಸಂಪೂರ್ಣ ನಾಶವಾಗಿದ್ದು, ಇದನ್ನು ದುರಸ್ತಿ ಗೊಳಿಸಲು ತಿಂಗಳುಗಳ ಕಾಲ ಕಾಮಗಾರಿ ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್‌ 15ರಿಂದ ಸೆಪ್ಟೆಂಬರ್ 14ರವರೆಗೆ ವಾಹನ ಸಂಚಾರ ನಿಷೇಧಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಮಂಗಳೂರಿನ ‌ಪಚ್ಚನಾಡಿಯ ಡಂಪಿಂಗ್ ಯಾರ್ಡ್ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ತ್ಯಾಜ್ಯ ರಾಶಿಯ ಪರ್ವತವೇ ಕುಸಿಯುತ್ತಿದ್ದು, ಪರಿಣಾಮ ಮಂದಾರ ಎಂಬ ಪ್ರದೇಶದ 20ಕ್ಕೂ ಅಧಿಕ ಮನೆಯೂ ಸಂಪೂರ್ಣ ಆಹುತಿಯಾಗಿದೆ‌. ಅಲ್ಲದೆ 20 ಕ್ಕೂ ಅಧಿಕ ಎಕರೆ ಕೃಷಿಭೂಮಿ‌ ನಾಶವಾಗಿದೆ.

ABOUT THE AUTHOR

...view details