ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಮಳೆ ಅಬ್ಬರ ಕಡಿಮೆಯಾಗಿದೆ.ನೇತ್ರಾವತಿ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ಆದರೂ ಬೆಳ್ತಂಗಡಿಯ ಬಂಜಾರುಮಲೆ ಗ್ರಾಮದಲ್ಲಿ ಬೀಡು ಬಿಟ್ಟಿರುವಎನ್‌ಡಿಆರ್‌ಎಫ್ ತಂಡದ ಇನ್ಸ್‌ಪೆಕ್ಟರ್ ಸುಭಾಷ್ ಮಹಾಲಾ ತಮ್ಮ ತಂಡದೊಂದಿಗೆ ನೆರೆ ಸಂತ್ರಸ್ತರ ರಕ್ಷಣಾ ಕಾರ್ಯ ಹಾಗೂ ಅಗತ್ಯ ನೆರವು ನೀಡತೊಡಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ ತಗ್ಗಿದ ಮಳೆ ಅಬ್ಬರ.. ಸಂತ್ರಸ್ತರ ರಕ್ಷಣೆಗೆ ಮುಂದಾಯ್ತು ಎನ್‌ಡಿಆರ್‌ಎಫ್ ಪಡೆ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ನೇತ್ರಾವತಿ ನದಿಯ ಸೆಳವು ಕಡಿಮೆಯಾಗಿದೆ. ಆದರೂ ಎನ್‌ಡಿಆರ್‌ಎಫ್‌ತಂಡ ಬೆಳ್ತಂಗಡಿಯ ಬಂಜಾರುಮಲೆ ಗ್ರಾಮದಲ್ಲಿ ಬೀಡುಬಿಟ್ಟಿದೆ. ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಸುಭಾಷ್ ಮಹಾಲಾ ಅವರ ನೇತೃತ್ವದಲ್ಲಿ ಅಲ್ಲಿನ ಪ್ರವಾಹ ಸಂತ್ರಸ್ತರ ರಕ್ಷಣಾ ಕಾರ್ಯ ಹಾಗೂ ಸಂತ್ರಸ್ತರಿಗೆ ಅಗತ್ಯ ನೆರವು ನೀಡತೊಡಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಬಂಜಾರುಮಲೆಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು. ಈಗಾಗಲೇ ಹಲವಾರು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದ್ದು, ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಲೇ ಇದೆ. ಅಲ್ಲದೆ ಈ ಭಾಗದಲ್ಲಿ ಸಂತ್ರಸ್ತರಿಗೆ ಆಹಾರವನ್ನು ಪೂರೈಸುವ ಕಾರ್ಯವನ್ನು ಎನ್‌ಡಿಆರ್‌ಎಫ್ ತಂಡ ಮಾಡುತ್ತಿದೆ.
ಬೆಳ್ತಂಗಡಿ ತಾಲೂಕಿನಲ್ಲಿ 43 ಮಂದಿಯ ಎನ್‌ಡಿಆರ್‌ಎಫ್‌ತಂಡ ಸಂತ್ರಸ್ತರಿಗೆ ನೆರವು ಒದಗಿಸಲು ನಿಯೋಜನೆ ಗೊಂಡಿದೆ. ಅಲ್ಲದೆ ಅಗ್ನಿಶಾಮಕ ದಳ, ಕೋಸ್ಟ್ ಗಾರ್ಡ್, ಹೋಮ್ ಗಾರ್ಡ್‌ಗಳ ತಂಡವೂ ಸ್ಥಳದಲ್ಲಿ ಮೊಕ್ಕಾಂ ಹೂಡಿ ನೆರೆ ಸಂತ್ರಸ್ತರಿಗೆ ನೆರವು ನೀಡುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಈವರೆಗೆ 301 ಆಹಾರ ಕಿಟ್‌ಗಳ ವಿತರಣೆಯಾಗಿದೆ.