ಕರ್ನಾಟಕ

karnataka

ETV Bharat / state

ದ.ಕ. ಜಿಲ್ಲೆಯಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣ ಸ್ವಲ್ಪ ಬಿಡುವು ನೀಡಿದ್ದ. ಆದರೆ ಈಗ ಮತ್ತೆ ಹನಿ ಹನಿ ಮಳೆ ಸುರಿಯುತ್ತಿದೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳಗಳಲ್ಲಿ ತುಂತುರು ಮಳೆ ನಿರಂತರವಾಗಿ ಸುರಿಯುತ್ತಿದೆ.

rain

By

Published : Aug 13, 2019, 10:12 AM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊಂಚ ಬಿಡುವು ಪಡೆದಿದ್ದ ಮಳೆ ನಿನ್ನೆ ಸಂಜೆ ಏಳು ಗಂಟೆಯ ಬಳಿಕ ಮತ್ತೆ ನಿರಂತರವಾಗಿ ಸುರಿಯುತ್ತಿದೆ. ಇಂದು ಬೆಳಗ್ಗೆಯಿಂದ ಮಳೆ ಮುಂದುವರಿದಿದೆ.

ಮಂಗಳೂರಿನಲ್ಲಿ ಸಾಧಾರಣ ಮಳೆಯಾದ್ರೆ ಉಳಿದಂತೆ ಬೆಳ್ತಂಗಡಿ, ಪುತ್ತೂರು, ಬಂಟ್ವಾಳಗಳಲ್ಲಿ ತುಂತುರು ಮಳೆ ನಿರಂತರವಾಗಿ ಸುರಿಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ತುಂತುರು ಮಳೆ

ಆದರೆ ಎಲ್ಲೂ ಹಾನಿಯಾದ ವರದಿಯಾಗಿಲ್ಲ.‌ ಬೆಳ್ತಂಗಡಿ ತಾಲೂಕಿನಲ್ಲಿ ಹನಿ ಹನಿ ಮಳೆ ಬರುತ್ತಿದೆ. ಎನ್​ಡಿಆರ್​ಎಫ್ ತಂಡದ ಬೆಟಾಲಿಯನ್ ಬೀಡು ಬಿಟ್ಟಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಅಲ್ಲದೆ ಚಾರ್ಮಾಡಿ ಘಾಟ್​ನಲ್ಲಿ ಭೂಕುಸಿತ ಉಂಟಾದ ಪ್ರದೇಶಗಳಲ್ಲಿ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ.

ಸಕಲೇಶಪುರ-ಸುಬ್ರಹ್ಮಣ್ಯ ಸಿರಿಬಾಗಿಲು ಪ್ರದೇಶದಲ್ಲಿ ಹಾನಿಗೊಳಗಾಗಾದ ರೈಲ್ವೆ ಹಳಿಯ ದುರಸ್ತಿ ಕಾರ್ಯವು ವೇಗ ಪಡೆದಿದೆ. ರೈಲ್ವೆ ಸಿಬ್ಬಂದಿ ಹಾಗೂ ಹೊರಗುತ್ತಿಗೆ ಕಾರ್ಮಿಕರು ನಿರಂತರವಾಗಿ ರೈಲು ಹಳಿಯ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.

ABOUT THE AUTHOR

...view details