ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕಾರು ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಕಾರಣ ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳವಾಗಿದೆ.
ಉತ್ತಮ ಮಳೆಯಾದ ಪರಿಣಾಮ ನೇತ್ರಾವತಿ ನದಿ ಸೆಳವು ಹೆಚ್ಚಳ..
ಶಂಭೂರು ಎಎಂಆರ್ ಡ್ಯಾಂನಲ್ಲಿ ನೀರು ಭರ್ತಿಯಾಗಿ ವಿದ್ಯುತ್ ಉತ್ಪಾದನೆ ನಡೆಯುತ್ತಿದೆ. ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂನಲ್ಲಿಯೂ ಗೇಟ್ಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ..
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆ ಬಂಟ್ವಾಳದಲ್ಲಿ ಹರಿಯುವ ನೇತ್ರಾವತಿ ನದಿಯಲ್ಲೂ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಬುಧವಾರ ಬೆಳಗ್ಗೆ ನೀರಿನ ಮಟ್ಟ 5.2 ಮೀ ಇತ್ತು. ಜುಲೈ 6 ರಂದು 2.9 ಮೀ. ಹಾಗೂ 7 ರಂದು 4.1 ಮೀ ಕಂಡು ಬಂತು.
ಶಂಭೂರು ಎಎಂಆರ್ ಡ್ಯಾಂನಲ್ಲಿ ನೀರು ಭರ್ತಿಯಾಗಿ ವಿದ್ಯುತ್ ಉತ್ಪಾದನೆ ನಡೆಯುತ್ತಿದೆ. ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂನಲ್ಲಿಯೂ ಗೇಟ್ಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ. ಬಂಟ್ವಾಳದಲ್ಲಿ ನೀರಿನ ಅಪಾಯಕಾರಿ ಮಟ್ಟ 8.5 ಮೀ.ಆಗಿದ್ದು, ಮಳೆ ಕಡಿಮೆಯಾದ ತಕ್ಷಣವೇ ನದಿಯಲ್ಲಿ ನೀರಿನ ಮಟ್ಟವೂ ಇಳಿಕೆಯಾಗುತ್ತದೆ. ಕಳೆದ ವರ್ಷ ನೀರಿನ ಮಟ್ಟ ದಾಖಲೆಯ 11.6 ಮೀ. ದಾಟಿತ್ತು.