ಬಂಟ್ವಾಳ(ಮಂಗಳೂರು):ಶಾಸಕ ಯು.ರಾಜೇಶ್ ನಾಯ್ಕ್ ಉಳಿಪ್ಪಾಡಿ ಇಲ್ಲಿನ ಮಾಣಿ, ಬರಿಮಾರು ಮತ್ತು ಪೆರಾಜೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಭೆ ನಡೆಸಿದ್ದಾರೆ. ಕೊರೊನಾ ವೈರಸ್ ತಡೆಗಾಗಿ ರಚಿಸಲಾಗಿರುವ ಟಾಸ್ಕ್ ಫೋರ್ಸ್ ಸಮಿತಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ್ದಾರೆ.
ಬಂಟ್ವಾಳದಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಜೊತೆ ಚರ್ಚೆ ನಡೆಸಿದ ಶಾಸಕ ರಾಜೇಶ್ ನಾಯ್ಕ್ - corona news
ಕರಾವಳಿ ಭಾಗದಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಬಂಟ್ವಾಳದ ಹಲವು ಕಡೆ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಭೆ ನಡೆಸಿದ್ದಾರೆ. ಕೊರೊನಾ ವೈರಸ್ ತಡೆಗಾಗಿ ರಚಿಸಲಾಗಿರುವ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿದ್ದು, ಹಲವು ಕ್ರಮಗಳ ಕುರಿತು ಮಾಹಿತಿ ಪಡೆದಿದ್ದಾರೆ.
ಇನ್ನು ಸಭೆಯಲ್ಲಿ ವೈರಸ್ ತಡೆಗೆ ತೆಗೆದುಕೊಳ್ಳಲಾದ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಯಿತು. ಅಲ್ಲದೆ ಆಹಾರ ಸರಬರಾಜಿಗೆ ಯಾವೆಲ್ಲಾ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಚರ್ಚಿಸಲಾಗಿದೆ.
ಸಭೆಯಲ್ಲಿ ಜಿ.ಪಂ ಸದಸ್ಯರಾದ ಮಂಜುಳಾ ಮಾವೆ, ಕಮಲಾಕ್ಷಿ ಪೂಜಾರಿ, ತಾ.ಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬರಿಮಾರು ಗ್ರಾ.ಪಂ ಅಧ್ಯಕ್ಷ ವಸಂತ, ಮಾಣಿ ಗ್ರಾ.ಪಂ ಅಧ್ಯಕ್ಷೆ ಮಮತಾ ಎಸ್. ಶೆಟ್ಟಿ, ಪೆರಾಜೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾ, ಗ್ರಾ.ಪಂ ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.