ಮಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಕಟೀಲು ದೇವಾಲಯಕ್ಕೆ ತೆರಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದ್ರು.
ಕಟೀಲು ದೇವಸ್ಥಾನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ - ಕಟೀಲು ದೇವಾಲಯಕ್ಕೆ ರಾಜ್ನಾಥ್ ಸಿಂಗ್ ಭೇಟಿ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಕಟೀಲು ದೇವಾಲಯಕ್ಕೆ ತೆರಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಟೀಲು ದೇವಾಸ್ಥನಕ್ಕೆ ಭೇಟಿ
ನಗರದ ಬಂಗ್ರ ಕೂಳೂರಿನಲ್ಲಿ ನಡೆದ ಮೋದಿ ಸರಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾನೂನನ್ನು ಬೆಂಬಲಿಸಿ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಬಂದ ಅವರು ಮೊದಲಿಗೆ ಕಟೀಲಿಗೆ ತೆರಳಿ ಶ್ರೀದೇವಿಯ ದರ್ಶನ ಪಡೆದರು. ಈಗ ಕಟೀಲಿನಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಈ ಬಗ್ಗೆಯೂ ಅವರು ಮಾಹಿತಿ ಪಡೆದರು.
ರಾಜನಾಥ್ ಸಿಂಗ್ ಈ ಹಿಂದೆಯೂ ಮಂಗಳೂರಿಗೆ ಬಂದ ಸಂದರ್ಭದಲ್ಲಿ ಪೊಳಲಿ ರಾಜರಾಜೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವ ನಡೆಯುತ್ತಿತ್ತು. ಆಗ ಅವರು ಪೊಳಲಿಗೆ ತೆರಳಿ ಶ್ರೀ ರಾಜರಾಜೇಶ್ವರಿ ದೇವಿಯ ದರ್ಶನ ಪಡೆದಿದ್ದರು.