ಕರ್ನಾಟಕ

karnataka

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ವೀಕ್ಷಿಸಿದ ರಮಾನಾಥ ರೈ

ತಾಲೂಕಿನ ನರಿಕೊಂಬು ಗ್ರಾಮದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ರಮಾನಾಥ ರೈ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ತನ್ನ ಅವಧಿಯಲ್ಲಿ ಕೈಗೊಂಡ ಈ ಯೋಜನೆ ಇಂದು ಫಲಪ್ರದವಾಗಿದೆ ಎಂದು ತೃಪ್ತಿಪಟ್ಟರು.

By

Published : Jun 16, 2020, 6:45 PM IST

Published : Jun 16, 2020, 6:45 PM IST

Drinking water project
Drinking water project

ಬಂಟ್ವಾಳ: ನರಿಕೊಂಬು ಗ್ರಾಮದಲ್ಲಿ 18.29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಜ್ಜಾಗಿರುವ ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಇಂದು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಉಪಸ್ಥಿತಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ನರಿಕೊಂಬು, ಶಂಭೂರು, ಬಾಳ್ತಿಲ, ಗೋಳ್ತಮಜಲು ಹಾಗೂ ಅಮ್ಟೂರು ಗ್ರಾಮಗಳ 38 ಜನವಸತಿ ಕೇಂದ್ರಗಳಿಗೆ ಕುಡಿಯುವ ನೀರು ಸಿಗಲಿದೆ. ಈಗಾಗಲೇ ಪ್ರಾಯೋಗಿಕವಾಗಿ ನೀರು ಸರಬರಾಜು ಮಾಡಲಾಗಿದ್ದು, ಮುಂದೆ ಯೋಜನೆ ಫಲಪ್ರದವಾಗುವುದರಲ್ಲಿ ಸಂದೇಹವಿಲ್ಲ ಎಂದರು.

ರಮಾನಾಥ ರೈ, ಮಾಜಿ ಸಚಿವ

ತಮ್ಮ ಅಧಿಕಾರಾವಧಿಯಲ್ಲಿ ಯೋಜನೆಗಳನ್ನು ಕ್ಷೇತ್ರದಲ್ಲಿ ಮಂಜೂರು ಮಾಡಲು ಸಹಕರಿಸಿದ ಹಿಂದಿನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಧಿಕಾರಿ ವರ್ಗಕ್ಕೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.

ABOUT THE AUTHOR

...view details