ಕರ್ನಾಟಕ

karnataka

ETV Bharat / state

ವಿಟ್ಲದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ಮೂವರ ಬಂಧನ - undefined

ವಿಟ್ಲದಲ್ಲಿ ಅಪ್ರಾಪ್ತೆಯ ಮೇಲೆ ಗ್ರಾಮ ಪಂಚಾಯತ್ ಸಿಬ್ಬಂದಿಯೂ ಸೇರಿದಂತೆ ಐವರ ತಂಡ ನಿರಂತರ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಐವರ ವಿರುದ್ಧ ದೂರು ದಾಖಲಾಗಿದೆ. ಈವರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದು, ಇನ್ನು ಇಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಆರೋಪಿಗಳ ಬಂಧನ

By

Published : Jul 9, 2019, 10:10 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ‌ ತಾಲೂಕಿನ ವಿಟ್ಲದ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಬೇರೆ ಬೇರೆ ಸಂದರ್ಭದಲ್ಲಿ ಐವರು ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಟ್ಲ ನಿವಾಸಿಯಾಗಿರುವ ಅಪ್ರಾಪ್ತೆ ಮೇಲೆ ಗ್ರಾಮ ಪಂಚಾಯತ್ ಸಿಬ್ಬಂದಿ ಸೇರಿ ಐವರು ನಿರಂತರ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಈ ಕುರಿತು ಯುವತಿ ಐವರ ವಿರುದ್ಧ ಸಂತ್ರಸ್ತೆ ವಿಟ್ಲ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಐವರಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್, ಧನುಷ್ ನಾಯ್ಕ್ ಮತ್ತು ಕೃಷ್ಣ ನಾಯ್ಕ್ ಬಂಧಿತರು.

ಬಾಲಕಿಯನ್ನು ಗಣೇಶ್ ಎಂಬಾತ ಕಳೆದ ವರ್ಷ ಡಿಸೆಂಬರ್​ನಲ್ಲಿ ಮತ್ತು ಈ ವರ್ಷದ ಮಾರ್ಚ್​ನಲ್ಲಿ ಸುಬ್ರಹ್ಮಣ್ಯದಲ್ಲಿ ಪೂಜೆ ನೆಪದಲ್ಲಿ ಕರೆದುಕೊಂಡು ಹೋಗಿ ಎರಡು ಬಾರಿಯು ಎರಡು ದಿನ ಲಾಡ್ಜ್​ನಲ್ಲಿರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.

ಈ ವರ್ಷದ ಜನವರಿಯಿಂದ ಯುವತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಸಂದರ್ಭದಲ್ಲಿ ಅತ್ಯಾಚಾರ ಮಾಡಿದ ಆರೋಪಿಗಳು ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಂದು ಬಿಡುತ್ತೇವೆ ಎಂದು ಬೆದರಿಸಿದ್ದರು ಎನ್ನಲಾಗಿದೆ. ಇಂದು ವಿಟ್ಲ ಠಾಣೆಯಲ್ಲಿ ಬಾಲಕಿ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

For All Latest Updates

TAGGED:

ABOUT THE AUTHOR

...view details