ಕರ್ನಾಟಕ

karnataka

ETV Bharat / state

ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ - Rape convict sentenced to 10 years

ಅಪ್ರಾಪ್ತ ಬಾಲಕಿ ಮೇಲೆ ಅತ್ಯಚಾರವೆಸಗಿ ಗರ್ಭಿಣಿಯಾಗಿಸಿದ್ದ ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆಯನ್ನು ಮಂಗಳೂರು ಜಿಲ್ಲಾ ಕೋರ್ಟ್​ ತೀರ್ಪು ನೀಡಿದೆ.

ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

By

Published : Aug 22, 2019, 8:00 PM IST

Updated : Aug 22, 2019, 8:45 PM IST

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಚಾರವೆಸಗಿ ಗರ್ಭಿಣಿಯಾಗಿಸಿದ್ದ ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಸಜೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮೂಲತಃ ರಾಯಚೂರು ಜಿಲ್ಲೆಯವನಾದ,ಮುಚ್ಚೂರು ನೀರುಡೆ ನಿವಾಸಿ ನಾಗಪ್ಪ(25) ಶಿಕ್ಷೆಗೊಳಗಾದವನು. 2016ರ ಏಪ್ರಿಲ್ 21ರಂದು ಬೆಳಗ್ಗೆ 7:15ಕ್ಕೆ ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ.ಬಳಿಕವು ಆರೋಪಿ ಇದೇ ಖಯಾಲಿ ಮುಂದುವರೆಸಿದ್ದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಇದರಿಂದ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಮನೆಯವರು ವೈದ್ಯರ ಬಳಿ ತಪಾಸಣೆ ನಡೆಸಿದಾಗ ಆಕೆ ಗರ್ಭಿಣಿಯಾದ ವಿಚಾರ ತಿಳಿದು ಬಂದಿತ್ತು.

ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

ಈ ಸಂದರ್ಭ ಆಕೆಯನ್ನು ವಿಚಾರಸಿದಾಗ ಅತ್ಯಾಚಾರದ ವಿಷಯ ಬಾಯಿಬಿಟ್ಟಿದ್ದಳು. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ದೀರ್ಘ ಕಾಲದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ಈಗ ಅಪರಾಧಿಗೆ ಶಿಕ್ಷೆ ವಿಧಿಸಿದೆ. ನ್ಯಾಯಾಧೀಶರಾದ ಬಿ.ಆರ್. ಪಲ್ಲವಿಯವರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದು, ಸರ್ಕಾರದ ಪರ ವಕೀಲರಾದ ವೆಂಕಟರಮಣ ಸ್ವಾಮಿ ಸಿ. ವಾದ ಮಂಡಿಸಿದ್ದರು.

Last Updated : Aug 22, 2019, 8:45 PM IST

ABOUT THE AUTHOR

...view details