ಬೆಳ್ತಂಗಡಿ: ಅನಿವಾಸಿ ಭಾರತೀಯರಿಂದಲೇ ಪ್ರಾರಂಭಗೊಂಡು ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ರಂಗಗಳಲ್ಲಿ ಉತ್ತಮ ರೀತಿಯಲ್ಲಿ ಸೇವೆ ಮಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾ ಸಂಸ್ಥೆ ಎಎಮ್ಇಸಿ ಯನ್ನು ಕ್ವಾರಂಟೈನ್ ಕೇಂದ್ರ ಮಾಡಲು ಬಿಟ್ಟುಕೊಡಲು ಸಿದ್ಧ ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರ್ ಹಾಗೂ ಎಎಮ್ಇಸಿ ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಿವಾಸಿ ಭಾರತೀಯರ ಕ್ವಾರಂಟೈನ್ ಕೇಂದ್ರಕ್ಕೆ ಜಾಗ ನೀಡಲು ಸಿದ್ಧ : ಮೂಡಡ್ಕ ಸಂಸ್ಥೆ - ಅನಿವಾಸಿ ಭಾರತೀಯರ ಕ್ವಾರಂಟೈನ್ ಕೇಂದ್ರ
ಕರ್ನಾಟಕದ ಅನಿವಾಸಿ ಭಾರತೀಯರ ಕ್ವಾರಂಟೈನ್ ಕೇಂದ್ರ ಮಾಡಲು ಮೂಡಡ್ಕ ಸಂಸ್ಥೆಯನ್ನು ಬಿಟ್ಟುಕೊಡಲು ಸಿದ್ಧ ಎಂದು ಆಡಳಿತ ಮಂಡಳಿ ತಿಳಿಸಿದೆ.

ಜೀವನೋಪಾಯಕ್ಕಾಗಿ ವಿದೇಶದಲ್ಲಿರುವ ನೂರಾರು ಕನ್ನಡಿಗರು ಕೊರೊನ ಭೀತಿಯಿಂದ ಸಂಕಷ್ಟದಲ್ಲಿದ್ದಾರೆ. ಹಲವು ದೇಶಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅವರ ಸುರಕ್ಷತೆಯನ್ನು ಸರಕಾರವು ಖಚಿತಪಡಿಸಬೇಕೆಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಅಶ್ರಫ್ ಸಖಾಫಿ ಮಾಡಾವು ಆಗ್ರಹಿಸಿದರು.
2006 ರಲ್ಲಿ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಮೂಡಡ್ಕ ಎಂಬ ಕುಗ್ರಾಮದಲ್ಲಿ ಮರ್ಹೂಂ ಟಿ.ಎಚ್.ಉಸ್ತಾದರು ಸ್ಥಾಪಿಸಿದ ಸಂಸ್ಥೆಯು ಇಂದು ಒಂದೇ ಸೂರಿನಡಿಯಲ್ಲಿ ಧಾರ್ಮಿಕ, ಲೌಕಿಕ ಶಿಕ್ಷಣಗಳೆರಡನ್ನೂ ನೀಡಿ ಸಮಾಜಕ್ಕೆ ಅವರನ್ನು ಉತ್ತಮ ಉತ್ಪನ್ನಗಳಾಗಿ ನೀಡುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿಕೊಂಡು ಬರುತ್ತಿದೆ ಎಂದರು.