ಕರ್ನಾಟಕ

karnataka

By

Published : Oct 25, 2019, 12:56 PM IST

ETV Bharat / state

​​​​​​​ವಾಯುಭಾರ ಕುಸಿತ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್​

ದಕ್ಷಿಣ ಜಿಲ್ಲೆಯಾದ್ಯಂತ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ವಾಯುಭಾರ ಕುಸಿತ ಪರಿಣಾಮ ಕಡಲ್ಕೊರೆತ ಹೆಚ್ಚಾಗಿದ್ದು, ಮೀನುಗಾರಿಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್

ಮಂಗಳೂರು: ಅರಬ್ಬಿ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬೆಳಗ್ಗೆಯಿಂದ ಮಳೆ ಬಿಡುವು ಪಡೆದುಕೊಂಡಿದ್ದರೂ, ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್

ಸಮುದ್ರದ ಕಡೆಯಿಂದ ಬಿರುಸಾಗಿ ಗಾಳಿ ಬೀಸುತ್ತಿದೆ. ಸಮುದ್ರವೂ ಪ್ರಕ್ಷುಬ್ಧಗೊಂಡಿದ್ದು, ಕಡಲಿನ ಮೊರೆತ ಅಧಿಕವಾಗಿದೆ. ಉಳ್ಳಾಲದ ಕೈಕೋ, ಕಿಲೀರಿಯಾ, ಉಚ್ಚಿಲ ಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರವಾಗಿದೆ. ಪರಿಣಾಮ ಈ ಪ್ರದೇಶಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಅಲ್ಲದೆ ತಡೆಗೋಡೆಗೆ ಇರಿಸಿದ ಕಲ್ಲುಗಳು ಸಮುದ್ರ ಪಾಲಾಗಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

ತುರ್ತು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details