ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ - ದಕ್ಷಿಣ ಕನ್ನಡ ಜಿಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆಗಸ್ಟ್ 9 ರವರೆಗೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ ಜಿಲ್ಲಾಡಳಿತ
ಹವಾಮಾನ ಇಲಾಖೆಯು ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ್ದು, ಆಗಸ್ಟ್ 9 ರವರೆಗೆ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ , ಪದವಿವರೆಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ ನದಿ, ಸಮುದ್ರ ತೀರಕ್ಕೆ ಹೋಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಅಲ್ಲದೇ ಮುಂದಿನ ಮೂರು ದಿನಗಳವರೆಗೆ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.