ಕರ್ನಾಟಕ

karnataka

ETV Bharat / state

ರೆಡ್ ಬಾಕ್ಸೈಟ್ ದಂಧೆ: ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶ

ಮುಡಿಪು, ಇರಾ, ಬಾಳೆಪುಣಿ, ಇನ್ನೋಳಿ ಮುಂತಾದ ಪ್ರದೇಶಗಳಲ್ಲಿ ರೆಡ್ ಬಾಕ್ಸೈಟ್ ದಂಧೆ ನಡೆಯುತ್ತಿದ್ದು, ಈ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ
ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

By

Published : Oct 11, 2020, 10:39 AM IST

ಮಂಗಳೂರು: ನಗರದ ಹೊರವಲಯದಲ್ಲಿನ ‌ಮುಡಿಪು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ರೆಡ್ ಬಾಕ್ಸೈಟ್ ದಂಧೆ ಕುರಿತು ತನಿಖೆ ನಡೆಸಿ,10 ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.

ಇದಕ್ಕಾಗಿ 7 ಜನ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿದ್ದು, ಅ.20 ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ರೆಡ್ ಬಾಕ್ಸೈಟ್ ದಂಧೆ ಕುರಿತು ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಡಿಸಿ ಆದೇಶ

ಮುಡಿಪು, ಇರಾ, ಬಾಳೆಪುಣಿ, ಇನ್ನೋಳಿ ಮುಂತಾದ ಪ್ರದೇಶಗಳಲ್ಲಿ ರೆಡ್ ಬಾಕ್ಸೈಟ್ ಗಣಿಗಾರಿಕೆಯಿಂದ ಪ್ರಾಕೃತಿಕ ಸಂಪತ್ತು ಲೂಟಿಯಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅಲ್ಲದೇ ಸ್ಥಳೀಯರಿಂದಲೂ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆ ಜಿಲ್ಲಾಧಿಕಾರಿ ವಿಶೇಷ ತಂಡ ರಚಿಸಿ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details