ಮಂಗಳೂರು : ದ.ಕ.ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಜಾತ್ರೋತ್ಸವ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡದೆ, ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿದ್ದಾರೆ.
ಎಲ್ಲಾ ಕಡೆಗಳಲ್ಲಿ ಈಗ ಜಾತ್ರೋತ್ಸವ ಸಂಭ್ರಮವಿದೆ. ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ, ಕಾಟಿಪಳ್ಳ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಗಳ ಜಾತ್ರೋತ್ಸವದಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.
ಹಿಂದೂಯೇತರರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ನಿರ್ಧಾರ ತೆಗೆದುಕೊಂಡ ಹಿನ್ನೆಲೆ ದೇವಸ್ಥಾನಗಳ ಮುಂಭಾಗ ಬ್ಯಾನರ್ಗಳನ್ನು ಅಳವಡಿಕೆ ಮಾಡಲಾಗಿದೆ.