ಕರ್ನಾಟಕ

karnataka

ETV Bharat / state

ಮಂಗಳೂರು: ಸಮುದ್ರದಲ್ಲಿ ಹೃದಯಾಘಾತಕ್ಕೊಳಗಾಗಿದ್ದ ಮೀನುಗಾರನ ರಕ್ಷಣೆ - ನವಮಂಗಳೂರು ಬಂದರು

ಕರಾವಳಿ ರಕ್ಷಣಾ ಪಡೆಯಿಂದ ಹೃದಯಾಘಾತಕ್ಕೊಳಗಾಗಿದ್ದ ಮೀನುಗಾರನನ್ನು ರಕ್ಷಣೆ ಮಾಡಲಾಗಿದೆ.

ಹೃದಯಾಘಾತಕ್ಕೊಳಗಾಗಿದ್ದ ಮೀನುಗಾರನ ರಕ್ಷಣೆ
ಹೃದಯಾಘಾತಕ್ಕೊಳಗಾಗಿದ್ದ ಮೀನುಗಾರನ ರಕ್ಷಣೆ

By ETV Bharat Karnataka Team

Published : Sep 27, 2023, 8:31 PM IST

ಮಂಗಳೂರು (ದಕ್ಷಿಣ ಕನ್ನಡ) : ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಮೀನುಗಾರರೊಬ್ಬರಿಗೆ ಕಡಲಿನಲ್ಲೇ ಪ್ರಥಮ ಚಿಕಿತ್ಸೆ ಒದಗಿಸಿ, ತಕ್ಷಣವೇ ನವಮಂಗಳೂರು ಬಂದರಿಗೆ ಕರೆತಂದು ಹೆಚ್ಚಿನ ಚಿಕಿತ್ಸೆ ಪಡೆಯಲು ಕರಾವಳಿ ರಕ್ಷಣಾ ಪಡೆ ನೆರವಾಗಿದೆ.

ವಸಂತ ಎಂಬವರು 'ಬೇಬಿ ಮೇರಿ-4' ಎಂಬ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಮಂಗಳವಾರ ಮಧ್ಯಾಹ್ನ 3.20ರ ಸುಮಾರಿಗೆ ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಇರುವ ಅವರಿಗೆ ಎದೆ ಬೇನೆ ಹಾಗೂ ಉಸಿರಾಟದ ತೀವ್ರ ಸಮಸ್ಯೆ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸುಲ್ತಾನ ಎಂಬ ಮೀನುಗಾರಿಕಾ ದೋಣಿಯ ಮೀನುಗಾರರು ಈ ಬಗ್ಗೆ ಕರ್ನಾಟಕದ ಕರಾವಳಿ ರಕ್ಷಣಾ ಪಡೆಯ ಜಿಲ್ಲಾ ಕೇಂದ್ರಕ್ಕೆ ಮಾಹಿತಿ ನೀಡಿ ತುರ್ತು ನೆರವು ಕೋರಿದ್ದರು.

ಇದಕ್ಕೆ ಸ್ಪಂದಿಸಿದ ಕರಾವಳಿ ರಕ್ಷಣಾ ಪಡೆಯು ಸಾಗರ ರಕ್ಷಣಾ ಉಪಕೇಂದ್ರವನ್ನು (ಎಂಆರ್‌ಎಸ್‌ಸಿ) ಸನ್ನದ್ಧಗೊಳಿಸಿ, ತನ್ನೆಲ್ಲ ನೌಕೆಗಳಿಗೆ ತುರ್ತು ರಕ್ಷಣೆಯ ಅಗತ್ಯದ ಕುರಿತ ಸಂದೇಶವನ್ನು ಕಳುಹಿಸಿತು. ಈ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ತಡೆಯ ಇಂಟರ್‌ಸೆಪ್ಟ‌ರ್ ದೋಣಿ ಸಿ- 446, ಹೃದಯಾಘಾತದ ಲಕ್ಷಣಗಳನ್ನು ಎದುರಿಸುತ್ತಿದ್ದ ಮೀನುಗಾರ ವಸಂತ ಇವರಿದ್ದ ದೋಣಿಯತ್ತ ಧಾವಿಸಿ ಇಂಟರ್ ಸೆಪ್ಟರ್ ದೋಣಿಯ ಸಿಬ್ಬಂದಿ ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ, ಪ್ರಥಮ ಚಿಕಿತ್ಸೆ ಒದಗಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಅದೇ ದೋಣಿಯಲ್ಲಿ ಪಣಂಬೂರಿನ ನವಮಂಗಳೂರು ಬಂದರಿನ ದಕ್ಕೆಗೆ ಕರೆತಂದರು.

ಮೀನುಗಾರಿಕಾ ಇಲಾಖೆ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರದ ನೆರವಿನಿಂದ ಬಂದರಿನ ಜೆಟ್ಟಿಯಲ್ಲಿ ವಸಂತ ಅವರಿಗೆ ತುರ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲಾಯಿತು. ಬಳಿಕ ಮೀನುಗಾರಿಕಾ ದೋಣಿ ಮಾಲೀಕರನ್ನು ಸಂಪರ್ಕಿಸಿದ ಕರಾವಳಿ ರಕ್ಷಣಾ ಪಡೆಯ ಅಧಿಕಾರಿಗಳು ಹೃದಯಾಘಾತಕ್ಕ ಒಳಗಾದ ವ್ಯಕ್ತಿಯನ್ನು ನಗರದ ಎಸ್‌ಸಿಎಸ್‌ ಆಸ್ಪತ್ರೆಗೆ ದಾಖಲಿಸಿತು.

ಇದನ್ನೂ ಓದಿ :ಮಂಗಳೂರು: 'ಈದ್​ ಮಿಲಾದ್ ದಿನ ಹಸಿ ಮೀನು ವ್ಯಾಪಾರಕ್ಕೆ ಕಡ್ಡಾಯ ರಜೆ' ವಿವಾದ; ಮೀನುಗಾರರ ಸಂಘದ ಸ್ಪಷ್ಟನೆ ಹೀಗಿದೆ..

ABOUT THE AUTHOR

...view details