ಸುಳ್ಯ (ದಕ್ಷಿಣಕನ್ನಡ):ಕೊರೊನಾ ವೈರಸ್ ಮುನ್ನೆಚ್ಚರಿಕೆ ಬಗ್ಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದ ತಂಡವು ಜಿಲ್ಲೆಯ ಸುಳ್ಯ, ಕಡಬ, ನೆಲ್ಯಾಡಿ, ಉಪ್ಪಿನಂಗಡಿ ಸೇರಿದಂತೆ ವಿವಿಧ ಆರೋಗ್ಯ ಕೇಂದ್ರಗಳು, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಈ ಬಗ್ಗೆ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್, ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಆಸ್ಪತ್ರೆ, ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದೆ. ಮಾತ್ರವಲ್ಲದೆ, ವೈದ್ಯಾಧಿಕಾರಿಗಳು, ಸಿಬ್ಬಂದಿಗೆ ಸಲಹೆ ಸೂಚನೆ ನೀಡಲಾಗಿದೆ ಎಂದರು.