ಮಂಗಳೂರು: ಟ್ಯಾಂಕರೊಂದು ಹರಿದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್ನ ಕೈಕಂಬದಲ್ಲಿ ನಡೆದಿದೆ.
ಟ್ಯಾಂಕರ್ ಹರಿದು ವ್ಯಕ್ತಿ ಸಾವು: ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ - ಬಿ.ಸಿ.ರೋಡ್
ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದು, ಈ ದುರಂತದ ಭಯಾನಕ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಲ್ಲೂರಿನ ಕಂಜಿಲ ಗುಡ್ಡೆ ನಿವಾಸಿ ಯಾದವ ಪೂಜಾರಿ ಮೃತ ದುರ್ದೈವಿ, ಮಲ್ಲೂರಿನಲ್ಲಿ ಅಂಗಡಿ ನಡೆಸುತ್ತಿದ್ದ ಯಾದವ ಪೂಜಾರಿಯವರು ಅಂಗಡಿಗೆ ಸಾಮಾಗ್ರಿಗಳನ್ನು ತರಲು ಬಿ.ಸಿ.ರೋಡ್ಗೆ ಬಂದಿದ್ದು, ರಸ್ತೆ ದಾಟುವ ಸಂದರ್ಭದಲ್ಲಿ ಟ್ಯಾಂಕರ್ವೊಂದು ಡಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.