ಪುತ್ತೂರು: ಕಾಣಿಯೂರು ರಸ್ತೆಯ ಭಕ್ತಕೋಡಿ ಎಂಬಲ್ಲಿ ಅ.25ರಂದು ಎರಡು ಕಾರುಗಳ ಮಧ್ಯೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡ ಓಮ್ನಿ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಪುತ್ತೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ಸಾವು - car crash on Bhaktikodi on Caniyoor road
ಪುತ್ತೂರಿನಲ್ಲಿ ನಡೆದ ಎರಡು ಕಾರುಗಳ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಅಬ್ದುಲ್ ರೆಹಮಾನ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅಬ್ದುಲ್ ರೆಹಮಾನ್
ಪುತ್ತೂರು ಕಡೆಯಿಂದ ಸವಣೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಓಮ್ನಿ ಚಾಲಕ ಅಬ್ದುಲ್ ರೆಹಮಾನ್ ಎಂಬುವವರ ಎರಡು ಕಾಲಿಗೆ ಗಂಭೀರ ಗಾಯವಾಗಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತಪಟ್ಟ ಓಮ್ನಿ ಚಾಲಕ ಅಬ್ದುಲ್ ರೆಹಮಾನ್ ಅವರು ಬೆಳ್ಳಾರೆ ಸಮೀಪದ ಪಡ್ಪಿನಂಗಡಿಯವರು ಎಂದು ಹೇಳಲಾಗಿದೆ. ಸ್ವಿಫ್ಟ್ ಕಾರು ಕಾಣಿಯೂರು ಮೂಲದವರದ್ದಾಗಿದೆ. ಗಾಯಾಳುವನ್ನು ಪುಷ್ಪರಾಜ್ ಎಂಬುವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು.