ಕರ್ನಾಟಕ

karnataka

ETV Bharat / state

ಮಂಗಳೂರು: ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು - Road accident: Student death on the spot

ಬೆಳಗ್ಗೆ ಮನೆಯಿಂದ ಕಾಲೇಜಿಗೆ ಹೋಗಲೆಂದು ರಸ್ತೆ ದಾಟುತ್ತಿದ್ದಾಗ ವಿದ್ಯಾರ್ಥಿನಿಗೆ ಸರ್ವಿಸ್ ಬಸ್ಸೊಂದು ಡಿಕ್ಕಿ ಹೊಡೆದಿದೆ.

Student death on the spot
ಬಸ್ ಡಿಕ್ಕಿ: ಸ್ಥಳದಲ್ಲಿಯೇ ವಿದ್ಯಾರ್ಥಿನಿ ಸಾವು

By

Published : Mar 31, 2021, 4:27 PM IST

ಮಂಗಳೂರು:ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮರಕಡ ಜ್ಯೋತಿ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಜ್ಯೋತಿನಗರ ನಿವಾಸಿ ಪವಿತ್ರ (21) ಮೃತ ವಿದ್ಯಾರ್ಥಿನಿ. ಪವಿತ್ರ ಬೆಳಗ್ಗೆ ಮನೆಯಿಂದ ಕಾಲೇಜಿಗೆ ಹೋಗಲೆಂದು ರಸ್ತೆ ದಾಟುತ್ತಿದ್ದಾಗ ಸರ್ವಿಸ್ ಬಸ್ಸೊಂದು ಡಿಕ್ಕಿ ಹೊಡೆದಿದೆ. ಬಸ್​​ ಚಕ್ರ ಆಕೆಯ ತಲೆಯ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗ್ತಿದೆ. ಹತ್ತಿರದಲ್ಲೇ ಆಕೆಯ ಮನೆಯಿದ್ದು, ಕುಟುಂಬಸ್ಥರ ರೋಧನ ಮುಗಿಲು ಮುಟ್ಟುವಂತಿತ್ತು.

ಅಪಘಾತವಾದ ತಕ್ಷಣ ಬಸ್​​ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ತನಿಖೆ ಮುಂದುವರಿದಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details