ಕರ್ನಾಟಕ

karnataka

ETV Bharat / state

ರಸ್ತೆ ಸಂಪರ್ಕ ಸಮಸ್ಯೆ: ಅಡ್ಯಾಲು-ಕುಳ ಪ್ರದೇಶದ ಜನರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ - Adyalu Road problem

ಅಡ್ಯಾಲುವಿನಲ್ಲಿ ಸುಮಾರು 10 ಮನೆಗಳಿದ್ದು, ಈ ಮನೆಗೆ ಸರಿಯಾದ ರಸ್ತೆ ವ್ಯವಸ್ಥೆಗಳಿಲ್ಲ. ಮಳೆಗಾಲದಲ್ಲಂತೂ ಇವರ ಸಂಕಷ್ಟ ಹೇಳತೀರದಂತಿದೆ. ಪುತ್ತೂರು ಕಬಕ ರಸ್ತೆಯ ಕವಲು ದಾರಿಯಾದ ಅಡ್ಯಾಲು-ಕುಳ ರಸ್ತೆಯು ಸುಮಾರು 1 ಕೀ.ಮೀ. ಉದ್ದವಿದ್ದು, ಈ ರಸ್ತೆಯ ಕೊನೆಯ 200 ಮೀ.ನಷ್ಟು ವ್ಯಾಪ್ತಿಯಲ್ಲಿ ರಸ್ತೆಯಿಲ್ಲದೆ ಕಾಲು ದಾರಿಯಾಗಿ ಮಾರ್ಪಟ್ಟಿದೆ.

Road problem in Adyalu - Kula area
ಅಡ್ಯಾಲು- ಕುಳ ಪ್ರದೇಶದ ಜನರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

By

Published : Dec 8, 2020, 5:05 PM IST

ಪುತ್ತೂರು(ದಕ್ಷಿಣ ಕನ್ನಡ): ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯಿತಿಗೊಳಪಟ್ಟ ಅಡ್ಯಾಲು ಎಂಬಲ್ಲಿ ಸುಮಾರು 50 ವರ್ಷಗಳಿಂದ ನಡೆದಾಡಲೂ ಸರಿಯಾದ ದಾರಿಯಿಲ್ಲದೆ ಜನರು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನೋಟಾ ಮತದಾನದ ಮೂಲಕ ಅಭ್ಯರ್ಥಿಗಳ ಪರ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಅಡ್ಯಾಲುವಿನಲ್ಲಿ ಸುಮಾರು 10 ಮನೆಗಳಿದ್ದು, ಈ ಮನೆಗೆ ಸರಿಯಾದ ರಸ್ತೆ ವ್ಯವಸ್ಥೆಗಳಿಲ್ಲ. ಮಳೆಗಾಲದಲ್ಲಂತೂ ಇವರ ಸಂಕಷ್ಟ ಹೇಳತೀರದಂತಿದೆ. ಪುತ್ತೂರು ಕಬಕ ರಸ್ತೆಯ ಕವಲು ದಾರಿಯಾದ ಅಡ್ಯಾಲು-ಕುಳ ರಸ್ತೆಯು ಸುಮಾರು 1 ಕೀ.ಮೀ. ಉದ್ದವಿದ್ದು, ಈ ರಸ್ತೆಯ ಕೊನೆಯ 200 ಮೀ.ನಷ್ಟು ವ್ಯಾಪ್ತಿಯಲ್ಲಿ ರಸ್ತೆಯಿಲ್ಲದೆ ಕಾಲು ದಾರಿಯಾಗಿ ಮಾರ್ಪಟ್ಟಿದೆ. ಇಲ್ಲಿ ಸರಿಯಾದ ವಾಹನ ಸಂಚಾರ ಯೋಗ್ಯವಾದ ರಸ್ತೆ ನಿರ್ಮಾಣ ಮಾಡುವಂತೆ ಕಳೆದ 50 ವರ್ಷಗಳಿಂದಲೂ ಬೇಡಿಕೆ ಸಲ್ಲಿಸುತ್ತಲೇ ಬಂದಿದ್ದೇವೆ. ಆದರೆ ಪರಿಣಾಮ ಮಾತ್ರ ಶೂನ್ಯವಾಗಿದೆ ಎಂಬುದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.

ಪ್ರಧಾನಮಂತ್ರಿ, ಮುಖ್ಯಮಂತ್ರಿಗೂ ಮನವಿ

ನಮಗೆ ರಸ್ತೆ ವ್ಯವಸ್ಥೆ ಕಲ್ಪಿಸಿ ಎಂದು ಇಲ್ಲಿನ ಜನರು ಪ್ರಧಾನಮಂತ್ರಿ, ಮುಖ್ಯಮಂತ್ರಿಗೂ ಮನವಿ ಮಾಡಿದ್ದಾರೆ. ಈ ಮನವಿಗೆ ಸ್ಪಂದಿಸಿದ ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿ ರಸ್ತೆ ನಿರ್ಮಿಸಿಕೊಡುವಂತೆ ಗ್ರಾಮ ಪಂಚಾಯಿತಿಗೆ ಸೂಚನೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಈ ಹಿಂದಿನ ಶಾಸಕರು ಹಾಗೂ ಈಗಿನ ಶಾಸಕರಿಗೂ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿ, ತಹಶೀಲ್ದಾರ್‌ಗೂ ನೀಡಿದ ಮನವಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಇಡ್ಕಿದು ಪಂಚಾಯಿತಿಗೆ ನೀಡಿದ ಮನವಿಗಂತೂ ಲೆಕ್ಕವೇ ಇಲ್ಲ ಎನ್ನುತ್ತಾರೆ ಸ್ಥಳೀಯರು.

ಓದಿ:ಚುನಾವಣಾ ಆಯೋಗದಿಂದ ಪ್ರತಿ ಜಿಲ್ಲೆಗೂ ವೀಕ್ಷಕರ ನೇಮಕ: ಇಲ್ಲಿದೆ ಅಧಿಕಾರಿಗಳ ಮಾಹಿತಿ

ನಮಗೆ ರಸ್ತೆ ಮಾಡಿ ಕೊಡದಿದ್ದಲ್ಲಿ ನಾವು ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಅಡ್ಯಾಲು ಕುಳದ ಎಲ್ಲಾ ಮತದಾರರೂ ಈ ಬಾರಿಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದರು. ಈ ಬಗ್ಗೆ ಬ್ಯಾನರ್ ಹಾಕಿ ಎಚ್ಚರಿಸುವ ಕೆಲಸವನ್ನು ಮಾಡಿದ್ದರು. ಆದರೆ ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಆಗಿನ ಉಪ ವಿಭಾಗಾಧಿಕಾರಿಗಳು ರಸ್ತೆ ನಿರ್ಮಾಣದ ಮೌಖಿಕ ಭರವಸೆ ನೀಡಿ ಮತದಾನ ಬಹಿಷ್ಕಾರ ಹಿಂತೆಗೆದುಕೊಳ್ಳುವಂತೆ ಮನವೊಲಿಸಿದ್ದರು. ಅವರ ಭರವಸೆಯ ಮೇರೆಗೆ ಚುನಾವಣಾ ಬಹಿಷ್ಕಾರದಿಂದ ಇವರು ಹಿಂದೆ ಸರಿದಿದ್ದರು. ಆದರೆ ಉಪ ವಿಭಾಗಾಧಿಕಾರಿಗಳು ನೀಡಿದ ಭರವಸೆ ವಿಧಾನಸಭೆ ಚುನಾವಣೆ ಕಳೆದು ವರ್ಷಗಳೇ ಕಳೆದರೂ ಈತನಕ ಇವರ ಬಳಿಗೆ ಬಂದವರಿಲ್ಲ. ಇವರ ಸಮಸ್ಯೆಯನ್ನು ಕೇಳಿದವರಿಲ್ಲ. ಅದಕ್ಕಾಗಿ ಇದೀಗ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸುವ ತೀರ್ಮಾನ ನಮ್ಮದಾಗಿದೆ ಎನ್ನುವುದು ಇಲ್ಲಿನ ಜನರ ಹೇಳಿಕೆಯಾಗಿದೆ.

ABOUT THE AUTHOR

...view details