ಕರ್ನಾಟಕ

karnataka

ETV Bharat / state

ಮಂಗಳೂರು: ಪ್ರಜ್ಞೆ ತಪ್ಪಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ರೌಡಿಶೀಟರ್ - ಮಂಗಳೂರಿನಲ್ಲಿ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರೌಡಿಶೀಟರ್​ ಬಂಧನ,

ಬಾಲಕಿಯನ್ನು ಅತ್ಯಾಚಾರ ಮಾಡಿದ್ದ ರೌಡಿ ಶೀಟರ್​ನನ್ನು ಮಂಗಳೂರು ಪೊಲೀಸರು ಪೋಕ್ಸೋ ಪ್ರಕರಣದ ಮೇಲೆ ಬಂಧಿಸಿದ್ದಾರೆ.

Rowdysheeter arrested, Rowdysheeter arrested for minor rape case, Rowdysheeter arrested for minor rape case in Mangaluru, Mangaluru crime news, ರೌಡಿಶೀಟರ್​ ಬಂಧನ, ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರೌಡಿಶೀಟರ್​ ಬಂಧನ, ಮಂಗಳೂರಿನಲ್ಲಿ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರೌಡಿಶೀಟರ್​ ಬಂಧನ, ಮಂಗಳೂರು ಅಪರಾಧ ಸುದ್ದಿ,
ಅಪ್ರಾಪ್ತೆಯನ್ನು ಅತ್ಯಾಚಾರಗೈದ ರೌಡಿ ಶೀಟರ್ ಅಂದರ್

By

Published : Nov 7, 2021, 1:32 AM IST

ಮಂಗಳೂರು:ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾವೆಸಗಿರುವ ಆರೋಪದ ಮೇಲೆ ರೌಡಿಶೀಟರ್​ನನ್ನು ನಗರದ ಪಾಂಡೇಶ್ವರ ಮಹಿಳಾ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ.

ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆಯ ರೌಡಿಶೀಟರ್ ನವೀನ್ ಸಿಕ್ವೇರ (34) ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

ಆರೋಪಿ ನವೀನ್ ಸಿಕ್ವೇರ ಸಂತ್ರಸ್ತ ಬಾಲಕಿಯ ಸಹೋದರನೊಂದಿಗೆ ಗೆಳೆತನವಿತ್ತು. ಈ ಹಿನ್ನೆಲೆ ಆರೋಪಿ ಬಾಲಕಿಯ ಮನೆಗೆ ಕೆಲವೊಮ್ಮೆ ಬಂದು ಹೋಗುತ್ತಿದ್ದ. ಇತ್ತೀಚೆಗೆ ಆರೋಪಿ ಬಾಲಕಿಯ ಮನೆಗೆ ಯಾರೂ ಇಲ್ಲದ ಸಂದರ್ಭ ಬಂದಿದ್ದು, ಈ ಸಂದರ್ಭ ಜ್ಯೂಸ್‌ನಲ್ಲಿ ಅಮಲು ಪದಾರ್ಥ ಹಾಕಿ ನೀಡಿದ್ದಾನೆ. ಆಗ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.

ಈ ಘಟನೆ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ್ದಾಳೆ. ಆಕೆಯ ಪೋಷಕರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಪೋಕ್ಸೋ ಪ್ರಕರಣದಡಿ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

ABOUT THE AUTHOR

...view details