ಸುಳ್ಯ: ದ.ಕ ಜಿಲ್ಲೆಯ ಕೋವಿಡ್ ಲಸಿಕೀಕರಣದ ಪ್ರಗತಿ ಪರಿಶೀಲಿಸಲು ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಕೆ.ವಿ ಹಾಗೂ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ಅವರು ಇಂದು ನೆಲ್ಯಾಡಿ ಹಾಗೂ ಕುಕ್ಕೆ ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವವರ ಆರ್‌ಟಿಪಿಸಿಆರ್ ವರದಿ ನೆಗೆಟಿವ್ ಆಗಿರಬೇಕು ಹಾಗೂ ಕೋವಿಡ್‌ನ ಎರಡೂ ಡೋಸ್ ಲಸಿಕೆ ಪಡೆದುಕೊಂಡಲ್ಲಿ ಮಾತ್ರ ದರ್ಶನಕ್ಕೆ ಅನುಮತಿ ನೀಡಬೇಕು ಎಂದು ಹೇಳಿದ ಜಿಲ್ಲಾಧಿಕಾರಿಗಳು, ಕುಕ್ಕೆಯಲ್ಲಿ ಸಾಧ್ಯವಾದಷ್ಟು ಜನಸಂದಣಿ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ನೆಲ್ಯಾಡಿ ಪ್ರದೇಶದಲ್ಲಿ ಮೊದಲ ಡೋಸ್ ಲಸಿಕೆ ಪಡೆಯದ ಸುಮಾರು 500 ಅಧಿಕ ಮಂದಿ ಜನರಿದ್ದು, ಅವರಿಗೆ ಲಸಿಕೆ ನೀಡಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸುಬ್ರಹ್ಮಣ್ಯಕ್ಕೆ ಆಗಮಿಸುವವರ RTPCR ವರದಿ ನೆಗೆಟಿವ್ ಇರಬೇಕು, ಎರಡೂ ಡೋಸ್ ಕಡ್ಡಾಯ ಅದೇ ರೀತಿ ಎರಡನೇ ಡೋಸ್ ಲಸಿಕೆ ಪಡೆಯದವರಿಗೂ ಕೂಡಲೇ ಲಸಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೀಕರಣದ ಪ್ರಗತಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಕಡಬ ಹಾಗೂ ಸುಳ್ಯ ತಾಲೂಕಿನ ಹಲವು ಕಡೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ವಿವಿಧ ಕೆಲಸಗಳ ಪ್ರಗತಿ ಪರಿಶೀಲನೆ ಹಾಗೂ ಮಾಹಿತಿಗಳನ್ನು ಪಡೆದುಕೊಂಡರು.