ಕರ್ನಾಟಕ

karnataka

ETV Bharat / state

ದ.ಕ ಜಿಲ್ಲೆಯ ಕೇರಳ-ಕರ್ನಾಟಕ ಗಡಿಯಲ್ಲಿ RT-PCR ರಿಪೋರ್ಟ್ ಕಡ್ಡಾಯ: ಇರದವರಿಗೆ ಸ್ಥಳದಲ್ಲೇ ಪರೀಕ್ಷೆ - ಕೇರಳ-ಕರ್ನಾಟಕ ಗಡಿ

ಆರ್​ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಂಗಳೂರು ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಕೋವಿಡ್‌ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ದಿನದಲ್ಲಿ ರಿಪೋರ್ಟ್ ಅವರ ಕೈಸೇರಲಿದೆ.

mng
mng

By

Published : Jun 29, 2021, 11:44 AM IST

ಮಂಗಳೂರು (ದಕ್ಷಿಣ ಕನ್ನಡ):ದಕ್ಷಿಣ ಕನ್ನಡ ಜಿಲ್ಲೆಯ ಕೇರಳ ಮತ್ತು ಕರ್ನಾಟಕದ ಗಡಿಯಲ್ಲಿ ಕೇರಳದಿಂದ ಬರುವವರಿಗೆ ಆರ್​ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ರಾಜ್ಯ ಸರಕಾರದ ನಿರ್ದೇಶನದಂತೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಸಂಪರ್ಕಿಸುವ ತಲಪಾಡಿ, ಜಾಲ್ಸೂರು, ನೆಟ್ಟನಿಗೆ ಮುಡ್ನೂರು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು ಇಲ್ಲಿ ಕೋವಿಡ್‌ ನೆಗೆಟಿವ್ ರಿಪೋರ್ಟ್ ತೋರಿಸಬೇಕಿದೆ.

ಕೇರಳ-ಕರ್ನಾಟಕ ಗಡಿಯಲ್ಲಿ ತಪಾಸಣೆ- ಈಟಿವಿ ಭಾರತ ಪ್ರತಿನಿಧಿಯಿಂದ ವಿವರವಾದ ಮಾಹಿತಿ.

ಮಂಗಳೂರಿನ ತಲಪಾಡಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆಯ ಬಳಿಕ ತಪಾಸಣೆ ಆರಂಭಿಸಲಾಗಿದ್ದು, ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಂಗಳೂರು ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ದಿನದಲ್ಲಿ ರಿಪೋರ್ಟ್ ಅವರ ಕೈಸೇರಲಿದೆ.

ಕೇರಳ-ಕರ್ನಾಟಕ ಗಡಿಯಲ್ಲಿ ಪೊಲೀಸರಿಂದ ತಪಾಸಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ‌ ಪ್ರಕರಣಗಳು ಕಡಿಮೆಯಾಗುತ್ತಿರುವ ನಡುವೆ ಕೇರಳದಿಂದ ಬರುವ ಪ್ರಯಾಣಿಕರಿಂದ ಪ್ರಕರಣಗಳು ಹೆಚ್ಚಳವಾಗಬಾರದೆಂಬ ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ABOUT THE AUTHOR

...view details