ಕಡಬ (ದ.ಕ):ಕಡಬ ತಾಲೂಕಿನ ವರ್ತಕರು, ಆಟೋ ಚಾಲಕರು ಕೂಡಲೇ ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಅನಂತಶಂಕರ್ ಸೂಚಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಡಬ ಭಾಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ಹತೋಟಿಗೆ ತರುವ ಬಗ್ಗೆ ಕೊರೊನಾ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಹಂತ ಹಂತವಾಗಿ ಎಲ್ಲಾ ವಿಭಾಗದವರನ್ನೂ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.
ಕಡಬದ ಆಟೋ ಚಾಲಕರು, ವರ್ತಕರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಕಡಬದ ವರ್ತಕರು, ಅಂಗಡಿಯಲ್ಲಿರುವ ಸಿಬ್ಬಂದಿ ಮತ್ತು ಅಟೋ ಹಾಗೂ ಇತರೆ ವಾಹನ ಚಾಲಕರು ಕೂಡಲೇ ಸ್ವಯಂ ಪ್ರೇರಿತರಾಗಿ ಬಂದು ಕೋವಿಡ್ ಪರೀಕ್ಷೆ ಮಾಡಿಸಿ ಎಂದು ವಿನಂತಿಸಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮ ಗ್ರಾಮದಲ್ಲಿಯೂ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ, ಯಾರೊಬ್ಬರು ಈ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬಾರದು. ಮುಖ್ಯವಾಗಿ ಪೇಟೆಯಲ್ಲಿ ಸಾರ್ವಜನಿಕರೊಂದಿಗೆ ಸದಾ ಸಂಪರ್ಕದಲ್ಲಿರುವ ಅಂಗಡಿ ಮಾಲೀಕರು ಹಾಗೂ ವಾಹನ ಚಾಲಕರು ತಾವೇ ಮುಂದೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
ಅಂಗಡಿ ಮಾಲೀಕರು, ಸಿಬ್ಬಂದಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆಯೇ ಎಂದು ಪಟ್ಟಣ ಪಂಚಾಯತ್ ಸಿಬ್ಬಂದಿ ಪ್ರತಿಅಂಗಡಿ ಹಾಗೂ ವಾಹನ ಚಾಲಕರನ್ನು ಭೇಟಿ ಮಾಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಓದಿ:ಕೈಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ: ಮೂರು ದಿನ ಕಳೆದರೂ ಮುಗಿಯದ ಆಯ್ಕೆ ಕಸರತ್ತು