ಸುಳ್ಯ:ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆ ತಾಲೂಕಿನಲ್ಲಿ ಹಾಗೂ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು.
ತಾಲೂಕಿನ ಹಲವು ಕಡೆಗಳಲ್ಲಿ ಎಸ್.ಅಂಗಾರ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೀಕ್ಷಣೆಗೆ ದೊಡ್ಡ ಪರದೆಗಳನ್ನು ಅಳವಡಿಸಲಾಗಿತ್ತು. ಉಭಯ ತಾಲೂಕಿನ ವಿವಿಧ ಕಡೆಗಳಲ್ಲಿ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು.