ಸುಬ್ರಹ್ಮಣ್ಯ (ದಕ್ಷಿಣ ಕನ್ನಡ) :ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗದಿಯಾಗಿದ್ದು, ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸುಳ್ಯ ಸೇರಿದಂತೆ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಅಂಗಾರ ಸ್ಪಷ್ಟಪಡಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಹಿಂದಿನ ಬಿಜೆಪಿ ಆಡಳಿತದ ಅಭಿವೃದ್ಧಿ ಕೆಲಸಗಳನ್ನು ಜನತೆ ಮೆಚ್ಚಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. 135ಕ್ಕೂ ಅಧಿಕ ಸೀಟುಗಳನ್ನು ಗೆಲ್ಲುವ ನಿರೀಕ್ಷೆ ಇದೆ ಎಂದರು.
ಇದನ್ನೂ ಓದಿ :'ರಾಜಕೀಯ ಪಕ್ಷದವರಿಗೆ ಪ್ರವೇಶವಿಲ್ಲ' ಗಮನ ಸೆಳೆಯುತ್ತಿದೆ ಗೇಟಿಗೆ ಅಳವಡಿಸಲಾಗಿರುವ ಬ್ಯಾನರ್