ಸುಬ್ರಹ್ಮಣ್ಯ:ಕರ್ನಾಟಕ ಸರ್ಕಾರ ಅರಣ್ಯ ಇಲಾಖೆ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ಸಮೀಪದಲ್ಲಿ ನಿರ್ಮಾಣವಾದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನಾ ಸಮಾರಂಭವು ಜನವರಿ 22ರಂದು ನಡೆಯಲಿದೆ.
ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಮಧ್ಯಾಹ್ನ 3 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಮೀನುಗಾರಿಕೆ, ಮುಜರಾಯಿ, ಬಂದರು ಮತ್ತು ಒಳನಾಡು ಜಲಸಾರಿಗೆ, ಕರ್ನಾಟಕ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟನೆ ಮಾಡಲಿದ್ದಾರೆ.
ಜ.22 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಸಚಿವರಾದ ಎಸ್.ಅಂಗಾರ ವಹಿಸಲಿದ್ದಾರೆ. ಕರ್ನಾಟಕ ಅರಣ್ಯ ಸಚಿವರಾದ ಆನಂದ್ ಸಿಂಗ್, ಸಂಸದರಾದ ನಳೀನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿರಲ್ಲಿದ್ದಾರೆ.
ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಓದಿ: ಸ್ವಾಭಿಮಾನದ ‘ಚೇತನ’ಕ್ಕೆ ವ್ಯವಸಾಯವೇ ‘ವಿಶೇಷ’..!