ಉಳ್ಳಾಲ(ದಕ್ಷಿಣ ಕನ್ನಡ):ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರು ಇಂದು ಕುತ್ತಾರು ಕೊರಗಜ್ಜ ಆದಿಸ್ಥಳ ಹಾಗೂ ರಕ್ತೇಶ್ವರಿ ಹಾಗೂ ಎಳ್ವೆರ್ ಸಿರಿಕುಲು ಆದಿಸ್ಥಳಗಳಿಗೆ ಕುಟುಂಬ ಸಮೇತ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ದೈವಶಕ್ತಿಗಳು ಎಲ್ಲರಿಗೂ ಒಳಿತು ಕರುಣಿಸಲಿ. ದೇಶಕ್ಕೆ ಬಾಧಿಸಿರುವ ಸಾಂಕ್ರಾಮಿಕ ದೂರವಾಗಲಿ. ಎಲ್ಲರೂ ಪರಿಸರದೊಂದಿಗಿನ ಕಾಳಜಿಯ ಜೊತೆಗೆ ಸುಖಕರ ಜೀವನ ನಡೆಸಲಿ. ಪ್ರಕೃತಿ ಆರಾಧನೆಯೇ ದೈವಾರಾಧನೆ ಎಂದು ತಿಮ್ಮಕ್ಕ ಹೇಳಿದರು.
ಸಾಲುಮರದ ತಿಮ್ಮಕ್ಕನವರಿಗೆ ಸನ್ಮಾನ ತಿಮ್ಮಕ್ಕ ಅವರ ಮಗ ಉಮೇಶ್ ಮಾತನಾಡಿ, ಈ ಹಿಂದೆ ಆದಿಸ್ಥಳಕ್ಕೆ ಬಂದು ನೆರವೇರಿಸಿದ ಪ್ರಾರ್ಥನೆಗೆ ಫಲ ದೊರಕಿತ್ತು. ಇದಕ್ಕೆ ಪೂರಕವಾಗಿ ತಾಯಿ ಜೊತೆಗೆ ಬಂದಿದ್ದೇನೆ. ಅವರಿಗೂ ಇನ್ನಷ್ಟು ಶಕ್ತಿಗಳು ಆರೋಗ್ಯ ನೀಡಲಿ ಹಾಗೂ ಸರ್ವರಿಗೂ ಒಳಿತು ಕರುಣಿಸಲಿ ಎಂದರು.
ಆದಿಸ್ಥಳಗಳಿಗೆ ಸಾಲುಮರದ ತಿಮ್ಮಕ್ಕ ಭೇಟಿ ಈ ವೇಳೆ ಸಾಲುಮರದ ತಿಮ್ಮಕ್ಕ ಅವರನ್ನು ಮುನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷ ವಿಲ್ಫೆಡ್ ಡಿಸೋಜ ಸನ್ಮಾನಿಸಿದರು. ಕಂದಾಯ ಅಧಿಕಾರಿ ಮಂಜುನಾಥ್, ಗ್ರಾಮ ಅಭಿವೃದ್ಧಿ ಅಧಿಕಾರಿ ರಾಜೀವ್ ನಾಯ್ಕ್, ಗ್ರಾಮಕರಣಿಕೆ ರೇಷ್ಮಾ, ಕುತ್ತಾರು ಶ್ರೀ ಕೊರಗಜ್ಜ ರಕ್ತೇಶ್ವರಿ ಎಳ್ವೆರ್ ಸಿರಿಕುಲು ದೈವಸ್ಥಾನದ ಹರೀಶ್ ಕುತ್ತಾರ್ ಹಾಗೂ ಮುಂತಾದವರು ಇದ್ದರು.
ಆದಿಸ್ಥಳಗಳಿಗೆ ಸಾಲುಮರದ ತಿಮ್ಮಕ್ಕ ಭೇಟಿ ಇದನ್ನೂ ಓದಿ:ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿಗೆ ಮಾಲಿಕತ್ವ ಪ್ರಮಾಣ ಪತ್ರ