ಮಂಗಳೂರು: ಕೋವಿಡ್ -19 ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 252 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 258 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 246 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. 584 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 15 ಮಂದಿ ಮೇಲೆ ನಿಗಾವಹಿಸಲಾಗಿದೆ. 18 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ ನಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, 40 ಮಂದಿಯನ್ನು ಸುರತ್ಕಲ್ ನ ಎನ್ಐಟಿಕೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯ ಕ್ವಾರೆಂಟೈನ್ ನಲ್ಲಿ ಯಾರೂ ಇಲ್ಲ.