ದಕ್ಷಿಣಕನ್ನಡ :ಸುಪ್ರಸಿದ್ಧ ಪುಣ್ಯಕ್ಷೇತ್ರ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವಂತಹ ಇತರ ಸ್ಥಳಗಳಲ್ಲಿ ಕೊರೊನಾ ಮುನ್ನೆಚ್ಚರಿಕೆ ಸಲುವಾಗಿ ಸ್ಯಾನಿಟೈಸರ್ ಸಿಂಪಡಣೆ ಕಾರ್ಯ ನಡೆಯಿತು.
ಕೊರೋನಾ ಮುನ್ನೆಚ್ಚರಿಕೆ.. ಕುಕ್ಕೆ ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ - Corona Precaution
ಏನೆಕಲ್ಲು ಪ್ರದೇಶಗಳಲ್ಲೂ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ ಎಂದು ಸುಬ್ರಹ್ಮಣ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈಟಿವಿ ಭಾರತ್‌ಗೆ ತಿಳಿಸಿದ್ದಾರೆ.

ಕೊರೋನಾ ಮುನ್ನೆಚ್ಚರಿಕೆ: ಕುಕ್ಕೆ ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸ್ಯಾನಿಟೇಸರ್ ಸಿಂಪಡಣೆ
ಗ್ರಾಮ ಪಂಚಾಯತ್ ತುರ್ತು ಪರಿಸ್ಥಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಈ ಕ್ರಮಕೈಗೊಳ್ಳಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರ, ರಥಬೀದಿ, ನ್ಯಾಯಬೆಲೆ ಅಂಗಡಿ ಪರಿಸರ, ಆರೋಗ್ಯ ಕೇಂದ್ರ, ಪೊಲೀಸ್ ಠಾಣಾ ವಠಾರ, ವಿವಿಧ ಕಚೇರಿಗಳ ಪರಿಸರ ಸೇರಿ ಜನಸಂದಣಿ ಸೇರುವ ಎಲ್ಲಾ ಕಡೆಗಳಲ್ಲಿ ಸ್ಯಾನಿಟೇಸರ್ ಸಿಂಪಡಣೆ ಮಾಡಲಾಗಿದೆ. ಏನೆಕಲ್ಲು ಪ್ರದೇಶಗಳಲ್ಲೂ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ ಎಂದು ಸುಬ್ರಹ್ಮಣ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈಟಿವಿ ಭಾರತ್‌ಗೆ ತಿಳಿಸಿದ್ದಾರೆ.